ಮಾರ್ಚ್ 1 ರಿಂದ 8 ದಿನ 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ: ರೂ. 9 ಕೋಟಿ ವೆಚ್ಚದಲ್ಲಿ ಆಯೋಜನೆ

(ನ್ಯೂಸ್ ಕಡಬ) newskadaba.com ಜ.03 ಬೆಂಗಳೂರು:  ಬೆಂಗಳೂರಲ್ಲಿ ಈ ಬಾರಿ ಮಾರ್ಚ್ 1ರಿಂದ 8 ರವರೆಗೆ 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ನಡೆಯಲಿದೆ.ʻಸರ್ವ ಜನಾಂಗದ ಶಾಂತಿಯ ತೋಟʼ ಈ ವರ್ಷದ ಚಲನಚಿತ್ರೋತ್ಸವದ ಥೀಮ್‌ ಆಗಿ ಆಯ್ಕೆ ಮಾಡಲಾಗಿದೆ. ಕಳೆದ ವರ್ಷ ʻಸಾಮಾಜಿಕ ನ್ಯಾಯʼ ಥೀಮ್‌ ನಲ್ಲಿ ಚಲನಚಿತ್ರೋತ್ಸವ ಆಯೋಜಿಸಲಾಗಿತ್ತು.

ಈ ಕುರಿತು ಗೃಹ ಕಚೇರಿ ಕೃಷ್ಣಾದಲ್ಲಿ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಆಯೋಜನೆ ಸಮಿತಿಯೊಂದಿಗೆ ಚರ್ಚೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಈ ಬಾರಿಯ ಚಲನಚಿತ್ರೋತ್ಸವದಲ್ಲಿ ಪ್ರತಿ ವರ್ಷ 60ಕ್ಕೂ ದೇಶಗಳಿಂದ ಬಂದ ಸುಮಾರು 200ಕ್ಕೂ ಅಧಿಕ ಚಲನಚಿತ್ರಗಳನ್ನು 13 ಚಿತ್ರಮಂದಿರಗಳಲ್ಲಿ, ಸುಮಾರು 400 ಪ್ರದರ್ಶನಗಳನ್ನು ಆಯೋಜಿಸಲಾಗುತ್ತಿದೆ.

Also Read  ಮೂವರ ಅಪಹರಣ, ಇಬ್ಬರ ಬರ್ಬರ ಹತ್ಯೆ ► ಮಳೆಯಿಂದಾಗಿ ಸಿಕ್ಕಿಬಿದ್ದ ಆರೋಪಿಗಳು

Nk Cake House

2006ರಲ್ಲಿ ಆರಂಭವಾದ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಇದೀಗ 16ನೇ ಆವೃತ್ತಿಗೆ ಪ್ರವೇಶಿಸುತ್ತಿದೆ. ಸುಮಾರು ರೂ. 9ಕೋಟಿ ವೆಚ್ಚದಲ್ಲಿ ಚಲನಚಿತ್ರೋತ್ಸವನ್ನು ಆಯೋಜಿಸಲಾಗುತ್ತಿದೆ. ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಅಂತಾರಾಷ್ಟ್ರೀಯ ಮನ್ನಣೆ ಪಡೆದಿದ್ದು, ಬೆಂಗಳೂರು ಭಾರತೀಯ ಮತ್ತು ಅಂತಾರಾಷ್ಟ್ರೀಯ ಸಿನೆಮಾ ಸಂಸ್ಕೃತಿಯ ಮುಖ್ಯಕೇಂದ್ರವಾಗಿ ಬೆಳೆದಿದೆ ಎಂದು ಮುಖ್ಯಮಂತ್ರಿ ಹೇಳಿದರು.

error: Content is protected !!
Scroll to Top