(ನ್ಯೂಸ್ ಕಡಬ) newskadaba.com ಜ.07 ನಾಗ್ಪುರ: ಭಾರತದಲ್ಲಿ ಎಚ್‌ಎಂಪಿವಿ ಪ್ರಕರಣಗಳ ಸಂಖ್ಯೆ ಏಳಕ್ಕೆ ತಲುಪಿದೆ, ನಾಗ್ಪುರದಲ್ಲಿ ಎರಡು ಹೊಸ ಪ್ರಕರಣಗಳು ವರದಿಯಾಗಿವೆ. 7 ಹಾಗೂ 14 ವರ್ಷ ವಯಸ್ಸಿನ ಇಬ್ಬರು ಮಕ್ಕಳಿಗೆ ಸೋಂಕು ತಗುಲಿದೆ.
ಇಬ್ಬರು ಮಕ್ಕಳು ಉಸಿರಾಟದ ಸಮಸ್ಯೆ ಎದುರಿಸುತ್ತಿದ್ದಾರೆ. ಜನವರಿ 3 ರಂದು ಜ್ವರ ಮತ್ತು ಕೆಮ್ಮು ಚಿಕಿತ್ಸೆಗಾಗಿ ಮಕ್ಕಳನ್ನು ನಗರದ ರಾಮದಾಸ್‌ಪೇಟ್‌ನಲ್ಲಿರುವ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಪರೀಕ್ಷೆಯ ನಂತರ, ಆಸ್ಪತ್ರೆಯ ಅಧಿಕಾರಿಗಳು ಇಬ್ಬರೂ ಹೆಚ್‌ಎಮ್‌ಪಿವಿ ಸೋಂಕಿಗೆ ಒಳಗಾಗಿದ್ದಾರೆ ಎಂದು ದೃಢಪಡಿಸಿದ್ದಾರೆ.
ಇದಕ್ಕೂ ಮೊದಲು ಬೆಂಗಳೂರಿನಲ್ಲಿ ಎರಡು, ಚೈನ್ನೈನಲ್ಲಿ ಎರಡು, ಗುಜರಾತ್‌ನಲ್ಲಿ ಒಂದು ಮತ್ತು ಪಶ್ಚಿಮ ಬಂಗಾಳದಿಂದ ಒಂದು ಪ್ರಕರಣ ವರದಿಯಾಗಿತ್ತು. ಇದೀಗ ಭಾರತದಲ್ಲಿ ಒಟ್ಟು 7 ಪ್ರಕರಣಗಳು ಪತ್ತೆಯಾಗಿದೆ.