ಬಸ್ಸು-ಕ್ಯಾಂಟರ್ ನಡುವೆ ಡಿಕ್ಕಿ: ಕೋಲಾರ ಮೂಲದ ನಾಲ್ವರು ಸಾವು

(ನ್ಯೂಸ್ ಕಡಬ) newskadaba.com ಜ.09 ಕೋಲಾರ: ತಮಿಳುನಾಡಿನ ರಾಣಿಪೇಟೆ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕೋಲಾರ ಮೂಲದ ನಾಲ್ವರು ಮೃತಪಟ್ಟಿದ್ದಾರೆ. ಕೆಎಸ್​ಆರ್​ಟಿಸಿ ಬಸ್ ಹಾಗೂ ಕ್ಯಾಂಟರ್ ನಡುವೆ ಅಪಘಾತ ಸಂಭವಿಸಿ ಕ್ಯಾಂಟರ್​ನಲ್ಲಿದ್ದ ನಾಲ್ವರು ಮತ್ತು ಕೆಎಸ್​ಆರ್​ಟಿಸಿ ಬಸ್​ ಚಾಲಕ ಮೃತಪಟ್ಟಿದ್ದಾರೆ. ಕೆಎಸ್​ಆರ್​ಟಿಸಿ ಬಸ್​ನಲ್ಲಿದ್ದ ಓರ್ವ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದಾರೆ.

Nk Cake House

ರಾಣಿಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಕ್ಯಾಂಟರ್ ಚಾಲಕ ಮಂಜುನಾಥ್, ಕ್ಲೀನರ್ ಶಂಕರ್, ಸಹಾಯಕ ಸೋಮಶೇಖರ್, ವೆಂಕಟೇಶ್ ನಗರ ಗ್ರಾಮದ ರೈತ ಕೃಷ್ಣಪ್ಪ ಮೃತಪಟ್ಟವರಾಗಿದ್ದಾರೆ. ನಲ್ಲೂರು ಗ್ರಾಮದ ಸರಸ್ವತಮ್ಮ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ.

Also Read  ಕಡಬ: ಕಡವೆಗೆ ಢಿಕ್ಕಿ ಹೊಡೆದ ಅಪರಿಚಿತ ವಾಹನ ➤ ಗಾಯಗೊಂಡ ಕಡವೆ ಪಿಲಿಕುಳಕ್ಕೆ ವರ್ಗಾವಣೆ

ಮುಳಬಾಗಿಲು ತಾಲೂಕಿನ ನಲ್ಲೂರು ಗ್ರಾಮದ 50 ಮಂದಿ ಭಕ್ತರು ಕೆಎಸ್​ಆರ್​​ಟಿಸಿ ಬಸ್​ನಲ್ಲಿ ತಮಿಳುನಾಡಿನ ಮೇಲ್ಮರವತ್ತೂರು ಓಂ ಶಕ್ತಿ ದೇವಾಲಯಕ್ಕೆ ಹೋಗಿ ವಾಪಸಾಗುತ್ತಿದ್ದರು. ಕ್ಯಾಂಟರ್ ಶ್ರೀನಿವಾಸಪುರ ತಾಲೂಕು ಸೀಗೆಹಳ್ಳಿ ಗ್ರಾಮದಿಂದ ಚೆನೈಗೆ ತರಕಾರಿ ತುಂಬಿಕೊಂಡು ಹೋಗುತ್ತಿತ್ತು. ನಿನ್ನೆ ಬುಧವಾರ ರಾತ್ರಿ ತಮಿಳುನಾಡಿನ ರಾಣಿಪೇಟೆ ಬಳಿ ಕೆಎಸ್​ಆರ್​ಟಿಸಿ ಮತ್ತು ಕ್ಯಾಂಟರ್​ ನಡುವೆ ಅಪಘಾತ ಸಂಭವಿಸಿ ನಾಲ್ವರು ಮೃತಪಟ್ಟಿದ್ದಾರೆ. ಗಾಯಾಳುಗಳನ್ನು ವೇಲೂರು ಸಿಎಂಸಿ ಆಸ್ಪತ್ರೆ, ರತ್ನಗಿರಿ ಮೆಡಿಕಲ್ ಕಾಲೇಜಿನಲ್ಲಿ ದಾಖಲಿಸಲಾಗಿದೆ.

error: Content is protected !!
Scroll to Top