ಮಾರ್ಚ್ ಅಂತ್ಯದೊಳಗೆ ಪೌರಕಾರ್ಮಿಕರಿಗೆ ನೇಮಕಾತಿ ಆದೇಶ: BBMP

(ನ್ಯೂಸ್ ಕಡಬ) newskadaba.com ಜ.10 ಬೆಂಗಳೂರು: ಅಂತಿಮ ಆಯ್ಕೆ ಪಟ್ಟಿಯಲ್ಲಿ ಆಯ್ಕೆಯಾದ ಪೌರಕಾರ್ಮಿಕರಿಗೆ ಮಾರ್ಚ್ 2025ರ ಅಂತ್ಯದೊಳಗೆ ನೇಮಕಾತಿ ಆದೇಶವನ್ನು ನೀಡಲಾಗುವುದು ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಮುಖ್ಯ ಆಯುಕ್ತ ತುಷಾರ್ ಗಿರಿ ನಾಥ್ ಅವರು ಗುರುವಾರ ಹೇಳಿದರು.

Nk Cake House

ಪೌರಕಾರ್ಮಿಕರ ಪಿತಾಮಹರಾದ ಐ.ಪಿ.ಡಿ ಸಾಲಪ್ಪ ಅವರ ಜನ್ಮ ದಿನಾಚರಣೆ ಅಂಗವಾಗಿ ಪಾಲಿಕೆ ಕೇಂದ್ರ ಕಛೇರಿಯ ಆವರಣದಲ್ಲಿರುವ ಡಾ. ರಾಜ್ ಕುಮಾರ್ ಗಾಜಿನ ಮನೆಯಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಳಿಕ ಅವರು ಮಾತನಾಡಿದರು.

ಬಿಬಿಎಂಪಿ ವ್ಯಾಪ್ತಿಯಲ್ಲಿ ಖಾಯಂ ಮಾಡಿಕೊಳ್ಳುತ್ತಿರುವ ಪೌರಕಾರ್ಮಿಕರ ಪೈಕಿ ಪೊಲೀಸ್ ತಪಾಸಣೆ ಹಾಗೂ ಮೀಸಲಾತಿ ಪ್ರಮಾಣ ಪತ್ರಗಳ ಸಿಂಧುತ್ವ ಕಾರ್ಯ ನಡೆಯುತ್ತಿದ್ದು, ಆ ಪ್ರಕ್ರಿಯೆಯನ್ನು ಮಾರ್ಚ್ 2025ರ ಅಂತ್ಯದೊಳಗಾಗಿ ಪೂರ್ಣಗೊಳಿಸಲಾಗುವುದು ಎಂದು ತಿಳಿಸಿದರು. 1929 ರಲ್ಲಿ ಜನಿಸಿದ ಐಪಿಡಿ ಸಾಲಪ್ಪ ಸ್ವಾತಂತ್ರ್ಯದ ಹೋರಾಟಗಾರರಾಗಿದ್ದರು.ಬಿನ್ನಿಪೇಟೆ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದರು. ಪೌರಕಾರ್ಮಿಕರ ಜೀವನದ ಸ್ಥಿತಿಗತಿ ಅವರು 36 ಅಂಶಗಳ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದ್ದರು. ಈ ವರದಿಯನ್ನಾಧರಿಸಿ ಪೌರಕಾರ್ಮಿಕರಿಗೆ ವಿವಿಧ ಸೌಲಭ್ಯಗಳು ಸಿಗುತ್ತಿದ್ದು, ಸಾಲಪ್ಪ ಅವರ ಕೊಡುಗೆ ಅನುಕರಣೀಯ ಎಂದು ಶ್ಲಾಘಿಸಿದರು.

Also Read  ಕಾಸರಗೋಡು: ಭಾರೀ ಮಳೆ ಮುನ್ಸೂಚನೆ- ನಾಳೆ ಶಾಲೆಗಳಿಗೆ ರಜೆ ಘೋಷಿಸಿದ ಜಿಲ್ಲಾಧಿಕಾರಿ

error: Content is protected !!
Scroll to Top