(ನ್ಯೂಸ್ ಕಡಬ) newskadaba.com ಜ.10 ಬೆಂಗಳೂರು: ಕಾಂಗ್ರೆಸ್ ಪಕ್ಷದ ಹೊಸ ಪ್ರಧಾನ ಕಚೇರಿ ‘ಇಂದಿರಾ ಗಾಂಧಿ ಭವನ’ ಉದ್ಘಾಟನೆ ಸಮಾರಂಭ ಜನವರಿ 15 ರಂದು ನಡೆಯಲಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಜನವರಿ 14 ಮತ್ತು 15 ರಂದು ರಾಷ್ಟ್ರ ರಾಜಧಾನಿ ನವದೆಹಲಿಗೆ ತೆರಳಿದ್ದಾರೆಂದು ಮೂಲಗಳಿಂದ ತಿಳಿದುಬಂದಿದೆ.
ಸೋಮವಾರ ನಡೆಯಲಿರುವ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯ ನಂತರಕ ಡಿಕೆ.ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಅವರು ದೆಹಲಿಗೆ ಭೇಟಿ ನೀಡಲಿದ್ದಾರೆಂದು ವರದಿಗಳು ತಿಳಿಸಿವೆ.
ಕೇವಲ ಸಿದ್ದರಾಮಯ್ಯ ಹಾಗೂ ಡಿಕೆ.ಶಿವಕುಮಾರ್ ಅಷ್ಟೇ ಅಲ್ಲದೆ, ಪರಮೇಶ್ವರ, ಸಿಎಂ ಆಪ್ತ ಸಚಿವರು ಕೂಡ ದೆಹಲಿಗೆ ಭೇಟಿ ನೀಡಲಿದ್ದು, ಈ ವೇಳೆ ಹೈಕಮಾಂಡ್ ನಾಯಕರ ಭೇಟಿ ಮಾಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.