ಪೆಟ್ರೋಲ್ ಬಂಕ್ ಗಳ ತಪಾಸಣೆ, ಅನರ್ಹರ ಬಿಪಿಎಲ್ ಕಾರ್ಡ್ ರದ್ದು ಮಾಡಿ- ಸಿಎಂ ಸಭೆಯಲ್ಲಿ ಸೂಚನೆ

(ನ್ಯೂಸ್ ಕಡಬ) newskadaba.com ಜ.10 ಬೆಂಗಳೂರು: ಬಿಪಿಎಲ್ ಪಡಿತರ ಚೀಟಿ ಹೊಂದಿರುವ ಅನರ್ಹರನ್ನು ಗುರುತಿಸಿ ಅವರನ್ನು ಪಟ್ಟಿಯಿಂದ ಹಂತ ಹಂತವಾಗಿ ತೆಗೆದುಹಾಕಬೇಕು. ಆದರೆ, ಒಬ್ಬನೇ ಒಬ್ಬ ಅರ್ಹನ ಬಿಪಿಎಲ್ ಕಾರ್ಡ್ ರದ್ದು ಮಾಡಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

Nk Cake House

ಬೆಂಗಳೂರಿನ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು, ಗ್ರಾಹಕರ ವ್ಯವಹಾರಗಳು ಮತ್ತು ಕಾನೂನು ಮಾಪನಶಾಸ್ತ್ರ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿದ ಅವರು ಅಧಿಕಾರಿಗಳು ಹಲವು ಆದೇಶಗಳನ್ನು ನೀಡಿದ್ದಾರೆ.

ಅನರ್ಹ ಬಿಪಿಎಲ್ ಕಾರ್ಡುದಾರರು ಸ್ವಯಂ ಪ್ರೇರಿತವಾಗಿ ತಮ್ಮ ಕಾರ್ಡ್‍ಗಳನ್ನು ಹಿಂತಿರುಗಿಸಲು ಕಾಲಾವಕಾಶ ನೀಡಬೇಕು. ಅದಾದ ನಂತರ ಅಂಥವರಿಗೆ ನೊಟೀಸ್ ನೀಡಿ ಬಿಪಿಎಲ್ ಕಾರ್ಡುಗಳನ್ನು ರದ್ದುಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ. ರಾಜ್ಯದಲ್ಲಿ ಒಟ್ಟು 4518 ಪೆಟ್ರೋಲ್‌ ಬಂಕ್‌ಗಳಿದ್ದು, ಡಿಸೆಂಬರ್‌ ಅಂತ್ಯದವರೆಗೆ 503 ಪೆಟ್ರೋಲ್‌ ಬಂಕ್‌ಗಳ ತಪಾಸಣೆ ಮಾಡಲಾಗಿದೆ. ಪೆಟ್ರೋಲ್‌ ಬಂಕ್‌ಗಳ ತಪಾಸಣೆಯನ್ನು ಹೆಚ್ಚಿಸಿ ಅಳತೆ ಮತ್ತು ಗುಣಮಟ್ಟದಲ್ಲಿ ಮೋಸದಂತಹ ಅಕ್ರಮಗಳಿಗೆ ಸಂಪೂರ್ಣ ಕಡಿವಾಣ ಹಾಕಬೇಕು ಎಂದು ತಿಳಿಸಿದರು.

Also Read  ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿ ➤ 3 ಪ್ರತ್ಯೇಕ ಪ್ರಕರಣ ದಾಖಲು

ಕನಿಷ್ಠ ಬೆಂಬಲ ಬೆಲೆ ಅಡಿ ಆಹಾರ ಧಾನ್ಯ ಸಂಗ್ರಹಿಸಲು ಎಲ್ಲಾ ವ್ಯವಸ್ಥೆ ಮಾಡಬೇಕು. ರೈತರಿಗೆ ಸಮಸ್ಯೆಯಾಗದಂತೆ ತ್ವರಿತವಾಗಿ ಎಲ್ಲಾ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಲು ಕ್ರಮ ಕೈಗೊಳ್ಳಬೇಕು.ರಾಜ್ಯದಲ್ಲಿ 1,53,69,945 ಪಡಿತರ ಚೀಟಿಗಳಿದ್ದು, 5,30,88,636 ಸದಸ್ಯ ಫಲಾನುಭವಿಗಳಿದ್ದಾರೆ. ಇಲಾಖೆಯಲ್ಲಿ ಒಟ್ಟು 709 ಹುದ್ದೆಗಳು ಖಾಲಿಯಿವೆ.ಒಂದು ರಾಷ್ಟ್ರ ಒಂದು ಪಡಿತರ ಚೀಟಿ ಯೋಜನೆಯಡಿ ಕರ್ನಾಟಕದಲ್ಲಿ ಬೇರೆ ರಾಜ್ಯಗಳ 13,383 ಫಲಾನುಭವಿಗಳು ಪಡಿತರ ಸೌಲಭ್ಯ ಪಡೆಯುತ್ತಿದ್ದಾರೆ ಎಂದರು. ಕುಟುಂಬದಲ್ಲಿ ಒಬ್ಬರೇ ಇರುವ, 80 ವರ್ಷ ದಾಟಿದವರಿಗೆ ಮನೆ ಬಾಗಿಲಿಗೆ ಆಹಾರ ಧಾನ್ಯ ಒದಗಿಸುವ ಅನ್ನ-ಸುವಿಧಾ ಯೋಜನೆಯನ್ನು ಜಾರಿಗೊಳಿಸಲಾಗಿದೆ. 8,500 ಪಡಿತರ ಚೀಟಿದಾರರು ಯೋಜನೆಯಡಿ ಪ್ರಯೋಜನ ಪಡೆಯುತ್ತಿದ್ದಾರೆ ಎಂದು ಹೇಳಿದರು.

Also Read  ಬೆಂಗಳೂರಿನ ಉದ್ಯಮಿ ಮೈಸೂರಲ್ಲಿ ಆತ್ಮಹತ್ಯೆ ➤ ಜೊತೆಗಿದ್ದ ಪತ್ನಿ ನಾಪತ್ತೆ...!

error: Content is protected !!
Scroll to Top