(ನ್ಯೂಸ್ ಕಡಬ) newskadaba.com ಜ.13 ಮಂಗಳೂರು: ಪಿಸ್ತಾ ತಿನ್ನುವಾಗ ಸಿಪ್ಪೆ ಗಂಟಲಲ್ಲಿ ಸಿಲುಕಿ 2 ವರ್ಷದ ಮಗುವೊಂದು ಸಾವನ್ನಪ್ಪಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಕುಂಬಳೆಯ ಭಾಸ್ಕರ್ ನಗರ ನಿವಾಸಿ ಅನ್ವರ್ – ಮೆಹರುನ್ನೀಸಾ ದಂಪತಿಯ ಪುತ್ರ ಅನಾಸ್ ಮೃತಪಟ್ಟ ಬಾಲಕ.
ಮನೆಯಲ್ಲಿ ಪಿಸ್ತಾದ ಸಿಪ್ಪೆ ತೆಗೆದು ತಿನ್ನುವಾಗ ಮಗುವಿನ ಗಂಟಲಿಗೆ ಪಿಸ್ತಾ ಸಿಲುಕಿಕೊಂಡಿತ್ತು. ಅದನ್ನು ಗಂಟಲಿಗೆ ಬೆರಳು ಹಾಕಿ ತೆಗೆಯಲಾಗಿತ್ತು. ಆದರೂ ಮಗುವಿನ ಉಸಿರಾಟದಲ್ಲಿ ತೊಂದರೆ ಕಂಡುಬಂದಾಗ ಕುಂಬಳೆ ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ ಶನಿವಾರ ರಾತ್ರಿ ಮಗುವಿಗೆ ಉಸಿರಾಟದ ಸಮಸ್ಯೆ ಉಲ್ಬಣಿಸಿತು. ನಿನ್ನೆ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ದಾರಿ ಮಧ್ಯೆ ಮಗು ಮೃತಪಟ್ಟಿದೆ ಎಂದು ವರದಿಯಾಗಿದೆ.