ಹಸುಗಳ ಕೆಚ್ಚಲು ಕೊಯ್ದ ಪ್ರಕರಣ: ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಜ.13 ಬೆಂಗಳೂರು: ಚಾಮರಾಜಪೇಟೆಯ ಓಲ್ಡ್ ಪೆನ್ಷನ್ ಮೊಹಲ್ಲಾದಲ್ಲಿ ಹಸುಗಳ ಕೆಚ್ಚಲು ಕೊಯ್ದ ಪ್ರಕರಣದ ಆರೋಪಿಯನ್ನು ಕಾಟನ್ಪೇಟೆ ಪೊಲೀಸರು ಬಂಧಿಸಿದ್ದಾರೆ.

Nk Cake House

ಬಿಹಾರ ಮೂಲದ ಶೇಖ್ ನಸ್ರೂ(35) ಬಂಧಿತ ಆರೋಪಿ. ಮದ್ಯದ ನಶೆಯಲ್ಲಿ ಕೃತ್ಯ ನಡೆಸಿರುವುದಾಗಿ ಆರೋಪಿ ತಪ್ಪೊಪ್ಪಿಕೊಂಡಿದ್ದಾನೆ. ಕೃತ್ಯ ನಡೆದ ಸ್ಥಳದಿಂದ ಸುಮಾರು 50 ಮೀಟರ್ನಷ್ಟು ದೂರ ಇರುವ ಪ್ಲಾಸ್ಟಿಕ್ ಹಾಗೂ ಬ್ಯಾಗ್ ಹೊಲಿಗೆ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಆರೋಪಿ ನಸ್ರೂ ಒಬ್ಬನೇ ಕೃತ್ಯ ಎಸಗಿದ್ದಾನೆ. ಬೇರೆ ಯಾರೂ ಭಾಗಿ ಆಗಿಲ್ಲ. ಆದರೂ ತನಿಖೆ ಮುಂದುವರೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಭಾನುವಾರ ಬೆಳಿಗ್ಗೆ ಘಟನೆ ನಡೆದಿದ್ದು, ಪಶು ಆಸ್ಪತ್ರೆಯಲ್ಲಿ ಹಸುಗಳಿಗೆ ಚಿಕಿತ್ಸೆ ಕೊಡಿಸಲಾಗಿದೆ. ಮೂರು ಹಸುಗಳೂ ಪ್ರಾಣಾಪಾಯದಿಂದ ಪಾರಾಗಿವೆ ಎಂದು ತಿಳಿದು ಬಂದಿದೆ.

Also Read  ಮಕ್ಕಳ ಕೈಗೆ ಪೆನ್ನು ಬದಲಾಗಿ ತಲ್ವಾರ್ ಕೊಡಿ ಹೇಳಿಕೆ; ಮರುಳಾರಾಧ್ಯ ವಿರುದ್ಧ ಎಫ್‌ಐಆರ್

ಆರೋಪಿಯ ವಿರುದ್ಧ ಬಿಎನ್ಎಸ್ ಸೆಕ್ಷನ್ 325 ಅಡಿ ಪ್ರಕರಣ ದಾಖಲಿಸಲಾಗಿದ್ದು, ಜನವರಿ 24ರ ತನಕ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಆರೋಪಿಯನ್ನು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಕಳುಹಿಸಲಾಗಿದೆ.

error: Content is protected !!
Scroll to Top