(ನ್ಯೂಸ್ ಕಡಬ) newskadaba.com ಜ.13 ಬೆಂಗಳೂರು: ಕನ್ನಡ ಪುಸ್ತಕ ಪ್ರಾಧಿಕಾರದ ಮಹತ್ವಾಕಾಂಕ್ಷಿ ಯೋಜನೆ ಯಾದ ‘ಮನೆಗೊಂದು ಗ್ರಂಥಾಲಯ’ ವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೃಹ ಕಚೇರಿ ಕೃಷ್ಣಾದಲ್ಲಿ ಉದ್ಘಾಟಿಸಿದರು.
ಇದೇ ಸಂದರ್ಭದಲ್ಲಿ ಪ್ರಾಧಿಕಾರ ಪ್ರಕಟಿಸಿರುವ ಕುಮಾರ ವ್ಯಾಸಭಾರತ ಸಂಪುಟಗಳನ್ನು ಲೋಕಾರ್ಪಣೆಗೊಳಿಸಿದರು.’ಮನೆಗೊಂದು ಗ್ರಂಥಾಲಯ’ದ ಮೊದಲ ಗ್ರಂಥಾಲಯವನ್ನು ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿಯೇ ಸ್ಥಾಪಿಸುತ್ತಿದ್ದು, ಗ್ರಂಥಾಲಯಕ್ಕೆ ಹಿರಿಯ ಸಾಹಿತಿ ನಾಡೋಜ ಡಾ. ಹಂ ಪ ನಾಗರಾಜಯ್ಯ ಚಾಲನೆ ನೀಡಿದರು. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಪುರುಷೋತ್ತಮ ಬಿಳಿಮಲೆ ಗ್ರಂಥಾಲಯ ಫಲಕವನ್ನು ಅನಾವರಣಗೊಳಿಸಿದರು.