ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ, ಸಿಎಂ ಕುರ್ಚಿ ಖಾಲಿ ಇಲ್ಲ; ಸಿಎಂ ಸಿದ್ದರಾಮಯ್ಯ

(ನ್ಯೂಸ್ ಕಡಬ) newskadaba.com ಜ.13 ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ. ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನವೂ ಖಾಲಿಯಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಧ್ಯಮಗಳು ಊಹಾಪೋಹಗಳನ್ನು ಹರಡುವ ಬದಲು ಸತ್ಯವನ್ನು ತೋರಿಸಬೇಕು. ಸ್ವತಃ ನಾನೇ ಸ್ಪಷ್ಟನೆ ನೀಡಿದರು, ಇನ್ನೂ ನಾಯಕತವ ಬದಲಾವಣೆ ವಿಚಾರ ಸುದ್ದಿಯಾಗುತ್ತಿದೆ. ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿಯಿಲ್ಲ, ಪಕ್ಷದಲ್ಲಿ ಯಾವುದೇ ರೀತಿಯ ಭಿನ್ನಾಭಿಪ್ರಾಯಗಳೂ ಇಲ್ಲ ಎಂದು ಸ್ಪಷ್ಟಪಡಿಸಿದರು.

Nk Cake House

ರಾಜ್ಯಕ್ಕೆ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಭೇಟಿ ನೀಡಿದ್ದು, ಕೆಪಿಸಿಸಿ, ಹಾಗೂ ಸಿಎಲ್‌ಪಿ ಸಭೆ ಸೇರಿದಂತೆ ಪಕ್ಷದ ಸರಣಿ ಸಭೆಗಳು ನಡೆಯುತ್ತಿವೆ. ಸಭೆಗೆ ಸುರ್ಜೇವಾಲಾ ಕೂಡ ಭಾಗಿಯಾಗಿದ್ದಾರೆ. ಈ ನಡುವೆ ಸುದ್ದಿಗಾರರೊಂದಿಗೆ ಮಾತನಾಡಿದ ಸುರ್ಜೇವಾಲಾ ಅವರು, ಬಿಜೆಪಿ ತನ್ನ ಆಂತರಿಕ ಸಮಸ್ಯೆಗಳನ್ನು ಮೊದಲು ಪರಿಹರಿಸಿಕೊಳ್ಳಲಿ ಎಂದು ತಿರುಗೇಟು ನೀಡಿದ್ದಾರೆ. ಕಾಂಗ್ರೆಸ್ ಸರ್ಕಾರ ಒಗ್ಗಟ್ಟಾಗಿದೆ. ಸಿದ್ದರಾಮಯ್ಯ ಸಿಎಂ. ಯಾವುದೇ ನಿರ್ಧಾರ ತೆಗೆದುಕೊಳ್ಳಬೇಕಾದರೂ ಅದನ್ನು ಪಕ್ಷದ ನಾಯಕತ್ವ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಮತ್ತು ಸೋನಿಯಾ ಗಾಂಧಿ ಅವರು ತೆಗೆದುಕೊಳ್ಳುತ್ತಾರೆಂದು ಹೇಳಿದರು.

Also Read  ಇನ್ಸ್ಟಾಗ್ರಾಮ್ ಬಳಕೆದಾರರೇ ಎಚ್ಚರ.! ➤ ಭಾರತದಲ್ಲಿ ಇನ್ಸ್ಟಾಗ್ರಾಮ್ ಬ್ಯಾನ್

error: Content is protected !!
Scroll to Top