(ನ್ಯೂಸ್ ಕಡಬ) newskadaba.com ಜ.14 ಕಲಬುರಗಿ: ಸರ್ಕಾರದ ವಿವಿಧ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಬಾಕಿ ಬರಬೇಕಿರುವ ಸುಮಾರು 32000 ಕೋಟಿ ರು. ಗಳನ್ನು 8 ದಿನದೊಳಗೆ ಬಿಡುಗಡೆ ಮಾಡುವಂತೆ ಆಗ್ರಹಿಸಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿ 8 ಸಚಿವರಿಗೆ ಪತ್ರ ಬರೆದಿದ್ದೇವೆ ಎಂದು ರಾಜ್ಯ ಗುತ್ತಿಗೆದಾರರ ಅಧ್ಯಕ್ಷ ಜಗನ್ನಾಥ ಶೇಗಜಿ ತಿಳಿಸಿದ್ದಾರೆ.
ಸಂಘದ ಅಲ್ಲದೆ, ಸಚಿವರಿಂದ ಸ್ಪಂದನೆ ಸಿಗದಿದ್ದರೆ ಮುಖ್ಯಮಂತ್ರಿಗೆ ಪತ್ರ ಬರೆಯುತ್ತೇವೆ. ಸಿಎಂರಿಂದಲೂ ಸ್ಪಂದನೆ ಸಿಗದಿದ್ದಲ್ಲಿ ಪ್ರಧಾನಿಗೆ ಪತ್ರ ಬರೆಯುತ್ತೇವೆ. ಅವರಿಂದಲೂ ಸ್ಪಂದನ ಸಿಗದಿದ್ದರೆ ಬೀದಿಗಿಳಿದು ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.