ಮರವಂತೆ ಬೀಚ್ ನಲ್ಲಿ ಮಾದಕ ವಸ್ತು ಸಾಗಾಟ ;ಐವರ ಬಂಧನ

(ನ್ಯೂಸ್ ಕಡಬ) newskadaba.com ಜ.14  ಉಡುಪಿ: ಮರವಂತೆ ಬೀಚ್ ಸಮೀಪ ಕಾರಿನಲ್ಲಿ ಎಮ್ ಡಿ ಎಮ್ ಎ ಪೌಡರ್ ಮಾರಾಟ ಮಾಡಲು ಯತ್ನಿಸುತ್ತಿದ್ದ ಐವರನ್ನು ಸೆನ್ ಪೊಲೀಸರು ವಶಕ್ಕೆ ಪಡೆದಿದ್ದಾರೆ.

Nk Cake House

ಬಂಧಿತರನ್ನು ಭಟ್ಕಳ ನಿವಾಸಿಗಳಾದ ಅಬ್ರಾರ್ ಶೇಖ್, ಮೊಹಮ್ಮದ್ ಇಸ್ಮಾಯಿಲ್ ಫರ್ಹಾನ್ , ಮೊಹಮ್ಮದ್ ಜಿಯಾಮ್ ಬೆಳ್ಳಿ, ನೌಮನ್ ಮತ್ತು ಸಜ್ಜಾದ್ ಮುಸ್ತಕೀಮ್ ಕೆವಾಕ ಎಂದು ಗುರುತಿಸಲಾಗಿದೆ. ಖಚಿತ ಮಾಹಿತಿ ಮೇರೆಗೆ ಸೆನ್ ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕ ರಾಮಚಂದ್ರನಾಯಕ್, ಸೆನ್ ಪೊಲೀಸ್ ಠಾಣಾ ಪೊಲೀಸ್ ಉಪನಿರೀಕ್ಷಕರಾದ ಪವನ್ ನಾಯಕ್, ಸಿಬ್ಬಂದಿಯವರಾದ ಪ್ರವೀಣ್ ಕುಮಾರ್, ಪ್ರವೀಣ್, ರಾಜೇಶ್ , ದಿಕ್ಷೀತ್, ನಿಲೇಶ್, ಮಾಯಪ್ಪ ಗಡದೆ ಮತ್ತು ಸುದೀಪ್ ರವರ ತಂಡ ಕುಂದಾಪುರ ತಾಲೂಕು ಮರವಂತೆ ಗ್ರಾಮದ ಮರವಂತೆ ಬೀಚ್ ಬಳಿ ಸಾರ್ವಜನಿಕ ಸ್ಥಳದಲ್ಲಿ ಕಾರಿನಲ್ಲಿ ನಿಷೇದಿತ ಮಾದಕ ವಸ್ತು MDMA ಪೌಡರ್ನ್ನು ಮಾರಾಟ ಮಾಡಲು ಹೊಂದಿದ್ದ ಆರೋಪಿಗಳನ್ನು ಬಂಧಿಸಿದ್ದಾರೆ.

error: Content is protected !!
Scroll to Top