ಕಡಬ: ಸೋಲಾರ್ ಪಾರ್ಕ್ ಸ್ಥಾಪನೆಗೆ ವಾರದೊಳಗೆ ಜಾಗ ಗುರುತಿಸುವಂತೆ ಸೂಚನೆ- ಸಂಸದ ಕ್ಯಾ. ಚೌಟ

(ನ್ಯೂಸ್ ಕಡಬ) newskadaba.com ಜ.14 ಕಡಬ: ಸವಣೂರು, ಸುಬ್ರಮಣ್ಯ ನೆಲ್ಯಾಡಿ ಮತ್ತು ಕಡಬದಲ್ಲಿ ಸೋಲಾರ್ ಪಾರ್ಕ್ ಸ್ಥಾಪಿಸುವುದಕ್ಕೆ ಜಾಗ ಗುರುತಿಸುವಂತೆ ಕೇಂದ್ರ ನವೀಕರಿಸಬಹುದಾದ ಇಂಧನ ಇಲಾಖೆಯಿಂದ ಪತ್ರ ಬಂದಿರುವ ಹಿನ್ನಲೆಯಲ್ಲಿ ಒಂದು ವಾರದೊಳಗೆ ಈ ಬಗ್ಗೆ ವರದಿ ನೀಡುವಂತೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಕಡಬ ತಾಲೂಕು ತಹಸೀಲ್ದಾರ್ಗೆ ಸೂಚನೆ ನೀಡಿದ್ದಾರೆ.

Nk Cake House

ಕಡಬ ತಾಲೂಕು ಕಚೇರಿಯಲ್ಲಿ ಜನವರಿ 13 ರಂದು ನಡೆದ ಸಾರ್ವಜನಿಕರ ಭೇಟಿ ವೇಳೆ ಮಾತನಾಡಿದ ಸಂಸದ ಕ್ಯಾ. ಚೌಟ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಪಿಎಂ ಕುಸುಮ್ ಯೋಜನೆಯಡಿ ದೇಶದೆಲ್ಲೆಡೆ ಸೋಲಾರ್ ಪಾರ್ಕ್ಗಳನ್ನು ಸ್ಥಾಪಿಸಿ ಗ್ರೀನ್ ಎನರ್ಜಿಗೆ ಒತ್ತು ನೀಡುವಂತೆ ಕರೆ ನೀಡಿದ್ದಾರೆ. ಇದಕ್ಕೆ ಪೂರಕವಾಗಿ ಇದೀಗ ಸವಣೂರು, ಸುಬ್ರಮಣ್ಯ ನೆಲ್ಯಾಡಿ ಮತ್ತು ಕಡಬದಲ್ಲಿ ಸೋಲಾರ್ ಪಾರ್ಕ್ ಸ್ಥಾಪಿಸಲು ಜಾಗ ಗುರುತಿಸುವಂತೆ ಸಚಿವಾಲಯದಿಂದ ಮೆಸ್ಕಾಂಗೆ ಪತ್ರ ಬಂದಿದೆ. ಹೀಗಾಗಿ, ಒಂದು ವಾರದೊಳಗೆ ಕಡಬ ತಾಲೂಕು ವ್ಯಾಪ್ತಿಯಲ್ಲಿ ಪಿಎಂ ಕುಸುಮ್ ಸೋಲಾರ್ ಪಾರ್ಕ್ ಸ್ಥಾಪನೆಗೆ ಸೂಕ್ತ ಸ್ಥಳಾವಕಾಶದ ಬಗ್ಗೆ ಪರಿಶೀಲಿಸಿ ಅದರ ಸಾಧಕ-ಬಾಧಕಗಳ ಬಗ್ಗೆ ವರದಿ ನೀಡುವಂತೆ ಸಂಸದರು ತಹಶಿಲ್ದಾರರಿಗೆ ಸೂಚಿಸಿದ್ದಾರೆ.

error: Content is protected !!
Scroll to Top