(ನ್ಯೂಸ್ ಕಡಬ) newskadaba.com ಮುಂಬೈ: ಬಾಲಿವುಡ್ ನಟ ಸೈಫ್ ಅಲಿ ಖಾನ್ಗೆ ಚೂರಿ ಇರಿತ ಪ್ರಕರಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಮುಂಬೈ ಪೊಲೀಸರು ಶುಕ್ರವಾರ ಬಂಧನಕ್ಕೊಳಪಡುಸಿದ್ದಾರೆ.
ಘಟನೆ ನಡೆದ ಸುಮಾರು 30 ಗಂಟೆಗಳ ಬಳಿಕ ಆರೋಪಿಯನ್ನು ಮುಂಬೈ ಪೊಲೀಸರು ಬಂಧಿಸಿದ್ದು, ಆತನನ್ನು ತೀವ್ರ ವಿಚಾರಣೆಗೊಳಪಡಿಸಿದ್ದಾರೆ. ಆರೋಪಿಯನ್ನು ಬಾಂದ್ರಾ ಪೊಲೀಸರು ಆರೋಪಿಯನ್ನು ಠಾಣೆಗೆ ಕರೆ ತಂದಿದ್ದು, ಅಲ್ಲಿ ವಿಚಾರಣೆ ನಡೆಸಲಾಗುತ್ತಿದೆ. ಗುರುವಾರ ನಸುಕಿನ 2.33 ಗಂಟೆ ಸುಮಾರಿಗೆ ದುಷ್ಕರ್ಮಿ ಅಪಾರ್ಟ್ಮೆಂಟ್ಗೆ ನುಗ್ಗಿದ್ದ ಆರೋಪಿ, ಸೈಫ್ ಕಿರಿಯ ಪುತ್ರನಿದ್ದ ಕೊಠಡಿಗೆ ತೆರಳಿ, ಅಲ್ಲಿದ್ದ ಮನೆಗೆಲಸದವರ ಬಳಿಕ 1 ಕೋಟಿ ರೂ. ಹಣ ನೀಡದಿದ್ದರೆ ಮಗುವನ್ನು ಹತ್ಯೆ ಮಾಡುವುದಾಗಿ ಬೆದರಿಸಿದ್ದಾನೆ. ಈವೇಳೆ ಕೂಗಾಟ ಕೇಳಿ ಕೊಠಡಿ ಬಳಿ ಬಂದ ಸೈಫ್ ಅವರು ಮಗನ ರಕ್ಷಣೆಗೆ ಮುಂದಾಗಿದ್ದಾರೆ. ಈ ವೇಳೆ ಆರೋಪಿ ಸೈಫ್ ಅವರ ಮೇಲೆ ಚೂರಿಯಿಂದ ಹಲ್ಲೆ ನಡೆಸಿದ್ದ. ಘಟನೆಯಲ್ಲಿ ಸೈಫ್ ಅಲಿ ಖಾನ್ ಅವರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಘಟನೆ ಬೆನ್ನಲ್ಲೇ ಆರೋಪಿ ಪತ್ತೆಗೆ ಮುಂಬೈ ಪೊಲೀಸರು ಭಾರೀ ಕಾರ್ಯಾಚರಣೆಗಿಳಿದಿದ್ದರು. ಆರೋಪಿಯ ಸಿಸಿಟಿವಿ ದೃಶ್ಯಾವಳಿಗಳು ಹಾಗೂ ಫೋಟೋವನ್ನು ಬಿಡುಗಡೆ ಮಾಡಿದ್ದರು. ಇದೀಗ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.