(ನ್ಯೂಸ್ ಕಡಬ) newskadaba.com ಜ.20 ಹೊಸದಿಲ್ಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಬಗ್ಗೆ ʼಕೊಲೆ ಆರೋಪಿʼ ಎಂಬ ಹೇಳಿಕೆಗೆ ಸಂಬಂಧಿಸಿದಂತೆ ಜಾರ್ಖಂಡ್ ನ್ಯಾಯಾಲಯದಲ್ಲಿ ಬಾಕಿ ಇರುವ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧದ ವಿಚಾರಣೆಗೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ.
ಪ್ರಕರಣವನ್ನು ರದ್ದುಗೊಳಿಸುವಂತೆ ರಾಹುಲ್ ಗಾಂಧಿ ಸಲ್ಲಿಸಿದ ಮನವಿಗೆ ಪ್ರತಿಕ್ರಿಯೆ ನೀಡುವಂತೆ ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರನ್ನೊಳಗೊಂಡ ಪೀಠವು ಜಾರ್ಖಂಡ್ ಸರ್ಕಾರ ಮತ್ತು ದೂರುದಾರ ಬಿಜೆಪಿ ನಾಯಕ ನವೀನ್ ಝಾ ಅವರಿಗೆ ನೋಟಿಸ್ ಜಾರಿ ಮಾಡಿದೆ. ಮುಂದಿನ ಸೂಚನೆ ಬರುವವರೆಗೆ ವಿಚಾರಣಾ ಪ್ರಕ್ರಿಯೆಗಳಿಗೆ ತಡೆ ನೀಡುವಂತೆ ನ್ಯಾಯಾಲಯ ಆದೇಶಿಸಿದೆ.