ಧರ್ಮಸ್ಥಳ ಕ್ಷೇತ್ರ, ಧರ್ಮಾಧಿಕಾರಿ ಕುಟುಂಬ ವಿರುದ್ಧ ಮಾನಹಾನಿ ಹೇಳಿಕೆ ನೀಡದಂತೆ ಹೈಕೋರ್ಟ್ ಆದೇಶ

(ನ್ಯೂಸ್ ಕಡಬ) newskadaba.com ಜ.22 ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ, ಅವರ ಕುಟುಂಬ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಸಂಬಂಧಿಸಿದ ಸಂಸ್ಥೆಗಳ ವಿರುದ್ಧ ಯಾವುದೇ ಮಾನಹಾನಿ ಹೇಳಿಕೆಗಳನ್ನು ನೀಡದಂತೆ ಮಹೇಶ್ ಶೆಟ್ಟಿ ತಿಮರೋಡಿ ಮತ್ತು ಅವರ ಅನುಯಾಯಿಗಳಿಗೆ ಸೂಚಿಸಿ ಕರ್ನಾಟಕ ಹೈಕೋರ್ಟ್ ಆದೇಶ ನೀಡಿದೆ.

ಸೋಮವಾರ, ನ್ಯಾ. ಆರ್. ದೇವದಾಸ್ ಅವರ ಏಕಸದಸ್ಯ ಪೀಠ ಈ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ಸಭೆಗಳಲ್ಲಿ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಡಾ. ಡಿ. ವೀರೇಂದ್ರ ಹೆಗ್ಗಡೆ, ಅವರ ಕುಟುಂಬ, ಧರ್ಮಸ್ಥಳಕ್ಕೆ ಸಂಬಂಧಿಸಿದ ಸಂಸ್ಥೆಗಳು ಹಾಗೂ ಮುಂದಿನ ಯೋಜನೆಗಳ ಬಗ್ಗೆ ಯಾವುದೇ ಅಪಪ್ರಚಾರ ಅಥವಾ ಮಾನಹಾನಿ ಹೇಳಿಕೆಗಳನ್ನು ನೀಡದಂತೆ ಆದೇಶಿಸಿದೆ.

Also Read  ಜೀವ ರಕ್ಷಣೆಗಾಗಿ ದಾರಿ ಬಿಡಿ ಸಾರ್ವಜನಿಕರ ತುರ್ತು ಗಮನಕ್ಕೆ ➤ ಪುತ್ತೂರಿನಿಂದ ಬೆಂಗಳೂರಿಗೆ ಅಂಬುಲೆನ್ಸ್ ಎಮರ್ಜೆನ್ಸಿ ಅಲರ್ಟ್

error: Content is protected !!
Scroll to Top