ನನ್ನನ್ನು ರಾಜಕೀಯವಾಗಿ ಮುಗಿಸಲು ಜನಾರ್ದನ ರೆಡ್ಡಿ ಯತ್ನ: ಶ್ರೀರಾಮುಲು ಗಂಭೀರ ಆರೋಪ

(ನ್ಯೂಸ್ ಕಡಬ) newskadaba.com ಜ.22  ಬೆಂಗಳೂರು: ಒಂದು ಕಾಲದಲ್ಲಿ ತಮ್ಮ ಆಪ್ತ ಸ್ನೇಹಿತರಾಗಿದ್ದ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರ ವಿರುದ್ಧವೇ ವಾಗ್ದಾಳಿ ನಡೆಸಿದ ಮಾಜಿ ಸಚಿವ ಬಿ ಶ್ರೀರಾಮುಲು ಅವರು, ನನ್ನನ್ನು ರಾಜಕೀಯವಾಗಿ ಮುಗಿಸಲು ಜನಾರ್ದನ ರೆಡ್ಡಿ ಯತ್ನಿಸುತ್ತಿದ್ದಾರೆ ಎಂದು ಬುಧವಾರ ಗಂಭೀರ ಆರೋಪ ಮಾಡಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷರ ಚುನಾವಣೆಗೆ ಕೌಂಟ್‌ಡೌನ್ ಶುರುವಾಗಿದೆ. ಹೀಗಾಗಿ ರಾಜ್ಯಕ್ಕೆ ಬಂದಿರುವ ಕರ್ನಾಟಕ ಉಸ್ತುವಾರಿ ರಾಧಾ ಮೋಹನ್ ದಾಸ್ ಅವರು ನಿನ್ನೆ ಸಂಜೆ ಕೋರ್ ಕಮಿಟಿ ಸಭೆ ನಡೆಸಿದರು.

ಕೋರ್ ಕಮಿಟಿ ಸಭೆಯಲ್ಲಿ ಸಂಡೂರು ವಿಧಾನಸಭೆ ಉಪಚುನಾವಣೆ ಸೋಲಿನ ಬಗ್ಗೆ ಚರ್ಚೆಯಾಗಿದ್ದು, ಈ ವೇಳೆ ನೀವು ಸರಿಯಾಗಿ ಕೆಲಸ ಮಾಡಿಲ್ಲ ಎಂದು ಶ್ರೀರಾಮುಲು ವಿರುದ್ಧವೇ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರ್ವಾಲ್ ಅವರು ಗಂಭೀರ ಆರೋಪ ಮಾಡಿದ್ದಾರೆ. ಇದರಿಂದ ತೀವ್ರ ಅಸಮಾಧಾನಗೊಂಡ ಶ್ರೀರಾಮುಲು, ಇನ್ನೂ ಕೂಡ ಉಪಚುನಾವಣೆ ಸೋಲಿನ ಕುರಿತ ವರದಿಯನ್ನೇ ಕೊಟ್ಟಿಲ್ಲ. ಸದಾನಂದ ಗೌಡ ಸಮಿತಿ ಉಪ ಚುನಾವಣೆ ಕುರಿತ ವರದಿಯನ್ನೇ ಕೊಟ್ಟಿಲ್ಲ. ಅದಕ್ಕೂ ಮೊದಲು ನೀವು ಹೇಗೆ ಕೆಲಸ ಮಾಡಿಲ್ಲ ಎನ್ನುತ್ತಿರಿ ಎಂದು ಶ್ರೀರಾಮುಲು, ಸಭೆಯಲ್ಲೇ ಪ್ರಶ್ನಿಸಿದ್ದಾರೆ.

Also Read  ಅಲ್ಪಸಂಖ್ಯಾತರ ವಿಶೇಷ ಪ್ರೋತ್ಸಾಹ ಧನಕ್ಕೆ ಅರ್ಜಿ ಆಹ್ವಾನ

error: Content is protected !!
Scroll to Top