‘ಅರಣ್ಯ ಪ್ರದೇಶದಲ್ಲಿ ಚಿತ್ರೀಕರಣಕ್ಕೆ ಸರ್ಕಾ ರದ ಅನುಮತಿ ಕಡ್ಡಾಯ’- ಖಂಡ್ರೆ

(ನ್ಯೂಸ್ ಕಡಬ) newskadaba.com ಜ.24 ಬೆಂಗಳೂರು : ಅರಣ್ಯ ಪ್ರದೇಶದಲ್ಲಿ ಇನ್ನು ಮುಂದೆ ಸಿನಿಮಾ, ಸಾಕ್ಷ್ಯ ಚಿತ್ರ, ಧಾರಾವಾಹಿ ಸೇರಿದಂತೆ ಯಾವುದೇ ಚಿತ್ರೀಕರಣಕ್ಕೆ ಸರ್ಕಾರದ ಅನುಮತಿ ಪಡೆಯುವುದನ್ನು ಕಡ್ಡಾಯಗೊಳಿಸಿ ಆದೇಶ ಹೊರಡಿಸಲು ಅರಣ್ಯ ಸಚಿವ ಈಶ್ವರ ಖಂಡ್ರೆ ಸೂಚನೆ ನೀಡಿದ್ದಾರೆ.

ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯವರಿಗೆ ಸ್ಪಷ್ಟ ಸೂಚನೆ ನೀಡಿರುವ ಸಚಿವರು, ಚಲನಚಿತ್ರ, ದೂರದರ್ಶನ ಸಾಕ್ಷ್ಯ ಚಿತ್ರ, ಧಾರಾವಾಹಿ ಇತ್ಯಾದಿ ಚಿತ್ರೀಕರಣಕ್ಕೆ ಸಂಬಂಧಿತ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ನಿಗದಿತ ಶುಲ್ಕ ಕಟ್ಟಿಸಿಕೊಂಡು ಅನುಮತಿ ನೀಡುತ್ತಿದ್ದಾರೆ. ಇದಲ್ಲದೆ ಸ್ಥಳೀಯ ಮಟ್ಟದಲ್ಲೂ ಅಧಿಕಾರಿಗಳು ಅನುಮತಿ ನೀಡುತ್ತಿರುವುದರಿಂದ ಅರಣ್ಯ ಪ್ರದೇಶದ ಗೌಪ್ಯ ಮಾಹಿತಿ ಹೊರಜಗತ್ತಿಗೆ ಲಭಿಸುವ ಸಂಭವ ಇರುತ್ತದೆ. ಇದು ಪರಿಸರ ಹಾಗೂ ಜೀವವೈವಿಧ್ಯಕ್ಕೂ ಧಕ್ಕೆ ತರುತ್ತದೆ ಎಂದು ತಿಳಿಸಿದ್ದಾರೆ.

Also Read  ಬಿಳಿನೆಲೆ : ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು

ಅರಣ್ಯ ಹಾಗೂ ವನ್ಯ ಜೀವಿಗಳನ್ನು ಸಂರಕ್ಷಿಸಿ ಮುಂದಿನ ಪೀಳಿಗೆಗೆ ಉತ್ತಮ ಪರಿಸರ, ಪ್ರಕೃತಿ ಹಸ್ತಾಂತರಿಸುವ ನಿಟ್ಟಿನಲ್ಲಿ ರಾಜ್ಯದ ಯಾವುದೇ ಅರಣ್ಯ ಪ್ರದೇಶದಲ್ಲಿ ಯಾವುದೇ ಬಗೆಯ ಚಿತ್ರೀಕರಣಕ್ಕೆ ಕಡ್ಡಾಯವಾಗಿ ಸರ್ಕಾರದವತಿಯಿಂದ ಅನುಮತಿ ಪಡೆಯಲು ಸೂಕ್ತ ಆದೇಶ ಹೊರಡಿಸುವಂತೆ ಸೂಚಿಸಿದ್ದಾರೆ.

error: Content is protected !!
Scroll to Top