ಉಡುಪಿ: ಐದು ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ, ಆರೋಪಿಯ ಬಗ್ಗೆ ಮಾಹಿತಿಗೆ ಪೊಲೀಸರ ಮನವಿ

(ನ್ಯೂಸ್ ಕಡಬ) newskadaba.com ಜ.25 ಉಡುಪಿ: ಐದು ವರ್ಷದ ಬಾಲಕಿಗೆ ಅಪರಿಚಿತ ವ್ಯಕ್ತಿಯೋರ್ವ ಲೈಂಗಿಕ ಕಿರುಕುಳ ನೀಡಿದ ಘಟನೆ ಉಡುಪಿ ನಗರದ ಪಿಪಿಸಿ ಸಮೀಪದ ಓಣಿಯಲ್ಲಿ ಗುರುವಾರ ಮಧ್ಯಾಹ್ನ ವೇಳೆ ನಡೆದಿದೆ.

ಸುಮಾರು 30 ವರ್ಷದ ಯುವಕ ಈ ಕೃತ್ಯ ಎಸಗಿದ್ದು, ಈ ಬಗ್ಗೆ ಬಾಲಕಿಯ ಪೋಷಕರು ನೀಡಿದ ದೂರಿನಂತೆ ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಪ್ರಕರಣದ ಕುರಿತು ತ್ವರಿತ ಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸೂಚನೆ ನೀಡಿದ್ದಾರೆ.

Also Read  ಮಂಗಳೂರು: ಎರಡು ಪ್ರತ್ಯೇಕ ಪ್ರಕರಣ ➤ ಚಿನ್ನದ ಕರಿಮಣಿ ಸರ ಎಗರಿಸಿದ ಖದೀಮರು

ಅಪಘಾತದಿಂದ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಘಟನೆಯ ಮಾಹಿತಿ ಬಂದ ತಕ್ಷಣ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಜೊತೆ ಮಾತನಾಡಿ ಘಟನೆಯ ವಿವರ ಪಡೆದಿದ್ದಾರೆ. ಘಟನೆಯನ್ನು ಗಂಭೀರವಾಗಿ ಪರಿಗಣಿಸಿ, ಆರೋಪಿಯನ್ನು ತಕ್ಷಣ ಪತ್ತೆ ಹಚ್ಚಬೇಕು. ಜೊತೆಗೆ, ಬಾಲಕಿಗೆ ಅಗತ್ಯವಾದ ಎಲ್ಲ ನೆರವನ್ನು ನೀಡಬೇಕು ಎಂದು ಸಚಿವರು ಜಿಲ್ಲಾಧಿಕಾರಿ ಹಾಗೂ ಎಸ್ಪಿಗೆ ಸೂಚನೆ ನೀಡಿದ್ದಾರೆ.

error: Content is protected !!
Scroll to Top