(ನ್ಯೂಸ್ ಕಡಬ) newskadaba.com ಜ.25 ಲಖನೌ: ಉತ್ತರ ಪ್ರದೇಶದಪ್ರಯಾಗ್‌ರಾಜ್ ಮಹಾ ಕುಂಭಮೇಳದಲ್ಲಿ ಇಂದು ಮುಂಜಾನೆ ಭೀಕರ ಬೆಂಕಿ ಅವಘಡ ಸಂಭವಿಸಿದೆ. ಪ್ರಯಾಗ್‌ರಾಜ್‌ನ ಮುಖ್ಯ ರಸ್ತೆಯ ಸೆಕ್ಟರ್-2ರ ಬಳಿ ನಿಲ್ಲಿಸಿದ್ದ ಎರಡು ಕಾರುಗಳು ಬೆಂಕಿಗಾಹುತಿಯಾಗಿವೆ.ಆದರೆ ಯಾವುದೇ ಅಪಾಯ ಕಂಡುಬಂದಿಲ್ಲ ಎನ್ನಲಾಗಿದೆ.
ಬೆಂಕಿ ಅವಘಡದ ಮಾಹಿತಿ ಸಿಕ್ಕಿದ ಕೂಡಲೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ತಂಡ ಬೆಂಕಿ ನಂದಿಸಿ ಹೆಚ್ಚಿನ ಅಗ್ನಿ ದುರಂತವನ್ನು ತಪ್ಪಿಸಿದೆ. ಈ ಅವಘಡದಲ್ಲಿ ಎರಡೂ ಕಾರುಗಳು ಸಂಪೂರ್ಣ ಸುಟ್ಟು ಕರಕಲಾಗಿದೆ. ಮುಂಜಾಗ್ರತೆ ಕ್ರಮವಾಗಿ ಸುತ್ತಮುತ್ತಲಿನ ವಾಹನಗಳನ್ನು ತೆರವುಗೊಳಿಸಲಾಯಿತು. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಸಾವು ನೋವು ಸಂಭವಿಸಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.