ಮಂಗಳೂರು:ದ.ಕ.ಜಿಲ್ಲಾ ಬಿಜೆಪಿ‌ ನೂತನ ಅಧ್ಯಕ್ಷರಾಗಿ ಸತೀಶ್ ಕುಂಪಲ ಪುನರಾಯ್ಕೆ

(ನ್ಯೂಸ್ ಕಡಬ) newskadaba.com, ಜ.29. :ದ.ಕ.ಜಿಲ್ಲಾ ಬಿಜೆಪಿ‌ ನೂತನ ಅಧ್ಯಕ್ಷರಾಗಿ ಹಾಲಿ ಅಧ್ಯಕ್ಷ ಸತೀಶ್ ಕುಂಪಲ ಅವರು ಪುನರಾಯ್ಕೆಯಾಗಿದ್ದಾರೆ. ಜಿಲ್ಲಾ ಬಿಜೆಪಿ ಚುನಾವಣಾಧಿಕಾರಿ ರಾಜೇಶ್ ಕಾವೇರಿ ಅವರು ನಗರದ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮುಂದಿನ ಮೂರು ವರ್ಷಗಳ ಅವಧಿಗೆ ಸತೀಶ್ ಕುಂಪಲ‌ ಅಧ್ಯಕ್ಷರಾಗಿ ಆಯ್ಕೆಯಾಗಿರುವುದಾಗಿ ಪ್ರಕಟಿಸಿದರು.

ರಾಜ್ಯ ಚುನಾವಣಾಧಿಕಾರಿ ಕ್ಯಾ.ಗಣೇಶ್ ಕಾರ್ಣಿಕ್, ದ.ಕ.ಸಂಸದ ಕ್ಯಾ.ಬ್ರಿಜೇಶ್ ಚೌಟ, ಸಹಾಯಕ ಚುನಾವಣಾಧಿಕಾರಿಗಳಾದ ವಿಕಾಸ್ ಪುತ್ತೂರು ಮತ್ತು ಸಾಜ ರಾಧಾಕೃಷ್ಣ ಆಳ್ವ, ವೀಕ್ಷಕ ಮೋನಪ್ಪ ಭಂಡಾರಿ , ಶಾಸಕರಾದ ಡಿ ವೇದವ್ಯಾಸ ಕಾಮತ್ ಮತ್ತು ಡಾ.ವೈ ಭರತ್ ಶೆಟ್ಟಿ, ಮಾಜಿ ಅಧ್ಯಕ್ಷ ಸಂಜೀವ ಮಠಂದೂರು ಉಪಸ್ಥಿತರಿದ್ದರು.

Also Read  ಸ್ವಾತಂತ್ರ್ಯ ದಿನಾಚರಣೆಯ ಹಿನ್ನಲೆಯಲ್ಲಿ ಮಂಗಳೂರು ➤ರೈಲ್ವೇ ನಿಲ್ದಾಣದಲ್ಲಿ ತಪಾಸಣೆ

error: Content is protected !!
Scroll to Top