ಮೈಕ್ರೋ ಫೈನಾನ್ಸ್ ಕಿರುಕುಳ ಕಡಿವಾಣಕ್ಕೆ ಸರ್ಕಾರದಿಂದ ಸುಗ್ರೀವಾಜ್ಞೆ ಜಾರಿ!

(ನ್ಯೂಸ್ ಕಡಬ) newskadaba.com, ಜ.30 ಬೆಂಗಳೂರು: ರಾಜ್ಯದಲ್ಲಿ ಮೀಟರ್‌ ಬಡ್ಡಿ ದಂಧೆ, ಬಾಕಿ ವಸೂಲಿ ಹೆಸರಿನಲ್ಲಿ ಶೋಷಣೆ ಮಾಡುತ್ತಿರುವ ಮೈಕ್ರೋ ಫೈನಾನ್ಸ್‌ ಕಂಪನಿಗಳನ್ನು ನಿಯಂತ್ರಿಸಲು ಕರ್ನಾಟಕ ಮೈಕ್ರೊ ಫೈನಾನ್ಸ್‌ ಸಂಸ್ಥೆಗಳ ನಿಯಂತ್ರಣ ವಿಧೇಯಕವನ್ನು ಸುಗ್ರೀವಾಜ್ಞೆ ಜಾರಿ ಮೂಲಕ ರಾಜ್ಯ ಸರ್ಕಾರ ಜಾರಿಗೊಳಿಸಿದೆ.

ಸಚಿವ ಸಂಪುಟ ಸಭೆಯ ನಂತರ ಮಾತನಾಡಿದ ಕಾನೂನು ಸಚಿವ ಹೆಚ್.ಕೆ. ಪಾಟೀಲ ಅವರು, ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಂಪನಿಗಳ ಸಾಲ ವಸೂಲಿ ಕ್ರಮ ಸರಿಯಾಗಿ ಇರಲಿಲ್ಲ. ಅಮಾನವೀಯ ನಡೆದುಕೊಳ್ಳಲಾಗಿದೆ ಅಂತ ದೂರು ಬಂದಿತ್ತು. ಈ ಹಿನ್ನೆಲೆಯಲ್ಲಿ ಸರ್ಕಾರ ಮಸೂದೆ ತರಲು ತಿರ್ಮಾನ ಮಾಡಿದ್ದೇವೆ. ಮಸೂದೆ ಬಗ್ಗೆ ಚರ್ಚೆ ಮಾಡಲಾಗಿದೆ. ಕೆಲವು ತಾಂತ್ರಿಕ ಸಮಸ್ಯೆ ಇದೆ. ಹೀಗಾಗಿ 4 ಗಂಟೆಗೆ ಸಿಎಂ ನೇತೃತ್ವದಲ್ಲಿ ಸಭೆ ನಡೆಯಲಿದೆ. ಅಲ್ಲಿ ಎಲ್ಲಾ‌ ವಿಚಾರ ಚರ್ಚೆ ಮಾಡುತ್ತೇವೆ. ನಮ್ಮಲ್ಲಿರುವ ಕಾನೂನು ಎಷ್ಟು ಅನುಕೂಲ/ ಅನಾನುಕೂಲ ಬಗ್ಗೆ ಚರ್ಚೆ ಮಾಡ್ತೇವೆ. ಸುಗ್ರೀವಾಜ್ಞೆ ತರಲು ಸಿಎಂ ಸಿದ್ದರಾಮಯ್ಯ ಅವರಿಗೆ ಸಚಿವ ಸಂಪುಟ ಅಧಿಕಾರ ನೀಡಿದೆ. ಸಿಎಂ ಸಭೆಯ ಬಳಿಕ ಕಾನೂನಾತ್ಮಕವಾಗಿ ತಿರ್ಮಾನ ಆಗಲಿದೆ ಎಂದು ತಿಳಿಸಿದರು.

Also Read  ದೇಶದಲ್ಲಿ ಎಲ್ಲದಕ್ಕೂ ಒಂದೊಂದು ಕಾಲ ಇರುತ್ತೆ: ಡಿಕೆಶಿ

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ ನಡೆದ ಸಭೆಯಲ್ಲಿ ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಂಪನಿಗಳಿಂದ ಜನರಿಗೆ ನೀಡುತ್ತಿರುವ ಕಿರುಕುಳವನ್ನು ತಪ್ಪಿಸಲು ಹಾಗೂ ಮೈಕ್ರೋ ಫೈನಾನ್ಸ್ ಕಂಪನಿಗಳನ್ನು ನಿಯಂತ್ರಿಸಲು ವಿಧೇಯಕವನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಲು ತೀರ್ಮಾನಿಸಲಾಯಿತು. ಈ ವಿಧೇಯಕವನ್ನು ರಾಜ್ಯಪಾಲರ ಅಂಕಿತಕ್ಕೆ ಕಳುಹಿಸಲಾಗುತ್ತದೆ. ರಾಜ್ಯಪಾಲರ ಅಂಕಿತ ಸಿಕ್ಕ ತಕ್ಷಣವೇ ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಂಪನಿಗಳ ಹಾವಳಿಗೆ ಕಡಿವಾಣ ಬೀಳಲಿದೆ. ಈ ಮೂಲಕ ಮೈಕ್ರೋ ಫೈನಾನ್ಸ್ ಸಾಲದ ಸುಳಿಗೆ ಸಿಲುಕಿ ಪರಿತಪಿಸುತ್ತಿರುವ ಹಾಗೂ ಸಾವಿಗೆ ಶರಣಾಗುತ್ತಿರುವ ಜನರಿಗೆ ಈ ಸುಗ್ರೀವಾಜ್ಞೆ ವರದಾನ ಆಗಲಿದೆ.

Also Read  ಕಡಬ ತಾಲೂಕಿನಲ್ಲಿ ಮತ್ತೆ ಪ್ರತ್ಯಕ್ಷಗೊಂಡ ಚಿರತೆ ನಾಯಿಗಳ ಮೇಲೆ ದಾಳಿ

error: Content is protected !!
Scroll to Top