ಸಿಲಿಂಡರ್‌ ಬೆಲೆ ಇಳಿಕೆ

(ನ್ಯೂಸ್ ಕಡಬ) newskadaba.com, ಫೆ.01 ನವದೆಹಲಿ: ಕೇಂದ್ರ ಬಜೆಟ್‌ಗೂ ಮುನ್ನವೇ ಸರ್ಕಾರ ಗ್ರಾಹಕರಿಗೆ ಸಿಹಿ ಸುದ್ದಿಯನ್ನು ನೀಡಿದೆ. ವಾಣಿಜ್ಯ ಬಳಕೆಯ ಎಲ್​ಪಿಜಿ ಸಿಲಿಂಡರ್​ ಬೆಲೆ ಇಳಿಕೆ ಮಾಡಿದೆ. ಬೆಲೆ ಏರಿಕೆಯಿಂದ ತತ್ತರಿಸಿದ್ದ ಜನರಿಗೆ ಕೊಂಚ ನೆಮ್ಮದಿ ದೊರೆಕಿದಂತಾಗಿದೆ. ತೈಲ ಮಾರುಕಟ್ಟೆ ಕಂಪನಿಗಳು ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಬೆಲೆಯನ್ನು 7ರೂಪಾಯಿಗಳಷ್ಟು ಇಳಿಸಿವೆ. . ಪರಿಷ್ಕೃತ ಬೆಲೆಗಳು 19 ಕೆಜಿ ವಾಣಿಜ್ಯ LPG ಸಿಲಿಂಡರ್‌ಗೆ ಅನ್ವಯಿಸುತ್ತವೆ.

ಹೊಸ ಪರಿಷ್ಕರಣೆಯಲ್ಲಿ ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ನ ಬೆಲೆ 7 ರೂ. ಇಳಿಕೆಯಾಗಿದೆ. ಇದರ ಪರಿಣಾಮವಾಗಿ , ಫೆಬ್ರವರಿ 1 ರಿಂದ, ರಾಷ್ಟ್ರ ರಾಜಧಾನಿಯಲ್ಲಿ 19 ಕೆಜಿ ವಾಣಿಜ್ಯ ಅನಿಲ ಸಿಲಿಂಡರ್‌ನ ಬೆಲೆ 1,804 ರೂಪಾಯಿಗಳಿಂದ 1,797 ರೂಪಾಯಿಗೆ ಇಳಿದಿದೆ. ಕೋಲ್ಕತ್ತಾದಲ್ಲಿ, ಎಲ್‌ಪಿಜಿ ಸಿಲಿಂಡರ್‌ನ ಬೆಲೆ 1,911 ರೂಪಾಯಿಗಳಿಂದ 1,907 ರೂಪಾಯಿಗೆ ಇಳಿದಿದೆ. ಮುಂಬೈನಲ್ಲಿ, ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಈಗ 1,749.50 ರೂಪಾಯಿಗಳಿಗೆ ಲಭ್ಯವಾಗಲಿದೆ. ಚೆನ್ನೈನಲ್ಲಿ, ಎಲ್‌ಪಿಜಿ ಸಿಲಿಂಡರ್‌ನ ಬೆಲೆ ಇಂದಿನಿಂದ 1,959.50 ರೂಪಾಯಿಗಳಾಗಿವೆ. ಬೆಂಗಳೂರಿನಲ್ಲಿ ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆ ಇಂದು 1,873.50 ರೂಪಾಯಿಗಳಾಗಿವೆ.

Also Read  ಮೂರನೇ ಬಾರಿ ದಿಲ್ಲಿಯ ಮುಖ್ಯಮಂತ್ರಿಯಾಗಿ ಕೇಜ್ರಿವಾಲ್ ಪ್ರಮಾಣ ವಚನ ಸ್ವೀಕಾರ

error: Content is protected !!
Scroll to Top