(ನ್ಯೂಸ್ ಕಡಬ) newskadaba.com, ಫೆ.01 : ನವದೆಹಲಿ: ಮಂಗಳೂರು ನಗರದಲ್ಲಿ ಈಗಾಗಲೇ ಹಲವು ಕಡೆಗಳಲ್ಲಿ ಬೀದಿ ಬದಿ ವ್ಯಾಪಾರದ ವಿರುದ್ಧ ಮಂಗಳೂರು ನಗರ ಪಾಲಿಕೆ ಕ್ರಮ ತೆಗೆದುಕೊಳ್ಳಲಾಗಿದ್ದು, ತೆರವು ಕಾರ್ಯಾಚರಣೆ ನಡೆದಿತ್ತು. ಸದ್ಯ ಇದು ಮತ್ತೆ ಮುಂದುವರೆದಿದೆ.
ಮಂಗಳೂರಿನ ಸ್ಟೇಟ್ ಬ್ಯಾಂಕ್ ಹಾಗೂ ಟೌನ್ ಹಾಲ್ ಪರಿಸರದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಬೀದಿ ಬದಿ ಅಂಗಡಿಗಳನ್ನು ತೆರವು ಮಾಡಲಾಗಿದೆ. ಬೀದಿ ಬದಿ ಅಂಗಡಿಗಳಿಂದಾಗಿ ಪಾದಚಾರಿಗಳಿಗೆ ನಡೆದಾಡಲು ತೊಂದರೆಯಾಗುತ್ತಿದೆ ಎಂದು ದೂರು ಕೇಳಿಬಂದಿದ್ದು, ಈ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಲಾಗಿದೆ ಎನ್ನಲಾಗಿದೆ. ಕಾರ್ಯಾಚರಣೆ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.