ಚಿನ್ನದ ದರದಲ್ಲಿ ಏಕಾಏಕಿ ಭಾರೀ ಏರಿಕೆ

(ನ್ಯೂಸ್ ಕಡಬ) newskadaba.com, ಫೆ.04 ಬೆಂಗಳೂರು: ಕೆಲವು ದಿನಗಳಿಂದ ಸತತ ಇಳಿಕೆ ಕಂಡಿದ್ದ ಚಿನ್ನದ ದರ ಇಂದು ಭಾರೀ ಏರಿಕೆ ಆಗಿದೆ. ಗ್ರಾಹಕರಿಗೆ ಬಿಗ್‌ ಶಾಕ್‌ ನೀಡಿದೆ. ಮಂಗಳವಾರ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 22 ಕ್ಯಾರಟ್‌ ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರದಲ್ಲಿ ತಲಾ 105 ರೂ. ಮತ್ತು 115ರೂ. ಏರಿಕೆ ಕಂಡಿದೆ. 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,810 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ 8,520 ರೂ. ಇದೆ.

22 ಕ್ಯಾರಟ್‌ ಚಿನ್ನದ ದರಗಳ ವಿವರ: 22 ಕ್ಯಾರಟ್‌ನ 8 ಗ್ರಾಂ ಚಿನ್ನ 62,480 ರೂ. ಬೆಲೆ ಬಾಳಿದರೆ, 10 ಗ್ರಾಂಗೆ ನೀವು 78,100 ರೂ. ಮತ್ತು 100 ಗ್ರಾಂಗೆ 7,81,000 ರೂ. ಪಾವತಿಸಬೇಕಾಗುತ್ತದೆ.

Also Read  ಮದುವೆ ಮಾಡಿಕೊಳ್ಳುವುದಕ್ಕೆ ಕುಜ ದೋಷ ಅಡ್ಡ ಬರುತ್ತಿದೆಯೇ .. ಎಷ್ಟೇ ಪ್ರಯತ್ನ ಮಾಡಿದ್ರು ನಿಮ್ಮ ಮದ್ವೆ ಸೆಟ್ ಆಗ್ತಿಲ್ವ .. ಹಾಗಾದ್ರೆ ನೀವು ಈ ಪರಿಹಾರವನ್ನು ಮಾಡಿ

24 ಕ್ಯಾರಟ್‌ ಚಿನ್ನದ ದರಗಳ ವಿವರ: 24 ಕ್ಯಾರಟ್‌ನ 8 ಗ್ರಾಂ ಚಿನ್ನ 68,160 ರೂ. ಬೆಲೆ ಬಾಳಿದರೆ, 10 ಗ್ರಾಂಗೆ ನೀವು 85,200 ರೂ. ಮತ್ತು 100 ಗ್ರಾಂಗೆ 8,52,000 ರೂ. ಪಾವತಿಸಬೇಕಾಗುತ್ತದೆ.

error: Content is protected !!
Scroll to Top