ಬಂಟ್ವಾಳ: ಇ.ಡಿ ಅಧಿಕಾರಿಗಳ ಸೋಗಿನಲ್ಲಿ ದಾಳಿ ಪ್ರಕರಣ: ಕೇರಳ ಮೂಲದ ಮತ್ತೋರ್ವ ಆರೋಪಿ ಅರೆಸ್ಟ್‌

(ನ್ಯೂಸ್ ಕಡಬ) newskadaba.com, ಫೆ.04 ಮಂಗಳೂರು: ವಿಟ್ಲ ಬೋಳಂತೂರು ನಾರ್ಶ ಸುಲೈಮಾನ್ ಹಾಜಿ ಅವರ ಮನೆಗೆ ಇ.ಡಿ ಅಧಿಕಾರಿಗಳ ಸೋಗಿನಲ್ಲಿ ದಾಳಿ ಮಾಡಿ, ದರೋಡೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಕೇರಳ ಮೂಲದ ಸಚಿನ್ ಎಂದು ಗುರುತಿಸಲಾಗಿದೆ. ವಿಟ್ಲ ಪೊಲೀಸರು ಕೇರಳದ ಕಣ್ಣೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿಯಿಂದ ಒಂದು ಕಪ್ಪು ಬಣ್ಣದ ಇನ್ನೋವ ಕಾರು ಮತ್ತು ಸ್ಯಾಮ್ಸಂಗ್ ಮೊಬೈಲ್ ಫೋನ್ ವಶಪಡಿಸಿಕೊಂಡಿದ್ದಾರೆ. ಆರೋಪಿಯನ್ನು ಪೊಲೀಸ್ ವಶಕ್ಕೆ ಪಡೆದು, ಬಂಧಿಸಿದ ಕೂಡಲೇ ಆರೋಪಿಯ ಆರೋಗ್ಯದಲ್ಲಿ ಏರುಪೇರಾದ ಕಾರಣ ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Also Read  ಶಾಸಕ ಹರೀಶ್ ಪೂಂಜ ರವರಿಗೆ ಕೊರೋನಾ ಪಾಸಿಟಿವ್

ಬಂಧಿತ ಆರೋಪಿ ಅಪಸ್ಮಾರ ಮತ್ತು ತಲೆನೋವು ಸಮಸ್ಯೆಯಿಂದ ಬಳಲುತ್ತಿದ್ದು, ಸರಕಾರಿ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಜನವರಿ 3 ರಂದು ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಬೋಳಂತೂರಿನ ನಾರ್ಶ ಎಂಬಲ್ಲಿ ಸಿಂಗಾರಿ ಬೀಡಿ ಮಾಲಕ ಸುಲೈಮಾನ್ ಹಾಜಿ ಮನೆಗೆ ಇಡಿ ಅಧಿಕಾರಿಗಳ ಹೆಸರಲ್ಲಿ ದಾಳಿ ಮಾಡಿ ದರೋಡೆ ಮಾಡಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಕೇರಳದ ಕೊಟ್ಟಾಯಂ ನಿವಾಸಿ ಅನಿಲ್ ಫೆರ್ನಾಂಡಿಸ್ ಎನ್ನುವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಇದೀಗ ಮತ್ತೊಬ್ಬ ಆರೋಪಿಯನ್ನು ಬಂಧಿಸಲಾಗಿದೆ. ಪ್ರಕರಣದಲ್ಲಿ ಇನ್ನೂ ನಾಲ್ವರು ಆರೋಪಿಗಳು ತಲೆಮರೆಸಿಕೊಂಡಿದ್ದಾರೆ.

error: Content is protected !!
Scroll to Top