(ನ್ಯೂಸ್ ಕಡಬ) newskadaba.com, ಫೆ.04 ಮಂಗಳೂರು: ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯ ಗ್ರಾಮವೊಂದರಲ್ಲಿ ನಕ್ಸಲರು ಇಬ್ಬರು ನಾಗರಿಕರನ್ನು ಹತ್ಯೆ ಮಾಡಿದ್ದಾರೆ.ಮೃತರನ್ನು ಕರಮ್ ರಾಜು (32) ಮತ್ತು ಮದ್ವಿ ಮುನ್ನಾ (27) ಎಂದು ಗುರುತಿಸಲಾಗಿದೆ. ಅದೇ ಊರಿನ ಗ್ರಾಮಸ್ಥರು ಎಂದು ತಿಳಿಯಲಾಗಿದೆ. ಈ ಕುರಿತು ಪೊಲೀಸರು ಮಾಹಿತಿ ನೀಡಿದ್ದು, ಸೋಮವಾರ ರಾತ್ರಿ ನಕ್ಸಲರು ಬುಗ್ಡಿಚೆರು ಗ್ರಾಮದಲ್ಲಿ ಇಬ್ಬರನ್ನು ಕತ್ತು ಸೀಳಿ ಕೊಲೆ ಮಾಡಿದ್ದಾರೆ. ಪರಿಣಾಮ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.
ಮಂಗಳವಾರ ಬೆಳಿಗ್ಗೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಮೃತ ಇಬ್ಬರು ಪೊಲೀಸರಿಗೆ ತಮ್ಮ ಬಗ್ಗೆ ಮಾಹಿತಿ ನೀಡುತ್ತಿದ್ದಾರೆ ಎಂದು ಶಂಕಿಸಿ ನಕ್ಸಲರು ಹತ್ಯೆ ಮಾಡಿದ್ದಾರೆ ಎಂದು ಗ್ರಾಮಸ್ಥರು ಪೊಲೀಸರಿಗೆ ತಿಳಿಸಿದ್ದಾರೆ. ಈ ಘಟನೆ ತರೆಮ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಇದಕ್ಕೂ ಮೊದಲು ಜನವರಿ 16 ಮತ್ತು 26 ರಂದು ನಕ್ಸಲರು ಇಬ್ಬರು ಗ್ರಾಮಸ್ಥರನ್ನು ಪೊಲೀಸ್‌ರಿಗೆ ಮಾಹಿತಿ ನೀಡುತ್ತಾರೆ ಎಂದು ಶಂಕಿಸಿ ಹತ್ಯೆ ಮಾಡಿದ್ದರು.