ಕಡಬ: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ದೂಪದ ಮರ – ಸವಾರ ಗಂಭೀರ

(ನ್ಯೂಸ್ ಕಡಬ) newskadaba.com ಕಡಬ, ಫೆ.03. ಚಲಿಸುತ್ತಿದ್ದ ಬೈಕ್ ಮೇಲೆ ದೂಪದ (ಹಾಲು ಮಡ್ಡಿ) ಮರ ಬಿದ್ದು ಬೈಕ್‌ ಸವಾರ ಗಾಯಗೊಂಡ ಘಟನೆ ಕಡಬ – ಪಂಜ ರಸ್ತೆಯ ಪುಳಿಕುಕ್ಕು ಸಮೀಪ ಮಂಗಳವಾರ ಸಂಜೆ ನಡೆದಿದೆ.

ಕಳೆದ ಕೆಲವು ತಿಂಗಳ ಹಿಂದಷ್ಟೇ ಇದೇ ಪರಿಸರದಲ್ಲಿ ದೂಪದ ಮರವೊಂದು ಚಲಿಸುತ್ತಿದ್ದ ದ್ವಿಚಕ್ರ ವಾಹನದ ಮೇಲೆ ಬಿದ್ದು ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಸುವ ಮುನ್ನವೇ ಮತ್ತೊಂದು ದುರ್ಘಟನೆ ಸಂಭವಿಸಿದೆ. ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.

Scroll to Top