ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಕಿರುಕುಳದಿಂದ 30 ಜನರು ಆತ್ಮಹತ್ಯೆ: ಆರ್.ಅಶೋಕ್

(ನ್ಯೂಸ್ ಕಡಬ) newskadaba.com , ಫೆ.07. ಮೈಸೂರು: ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಕಿರುಕುಳದಿಂದ 1 ಲಕ್ಷ ಜನರು ಗ್ರಾಮಗಳ ತೊರೆದಿದ್ದು, 30 ಮಂದಿ ಆತ್ಮಹತ್ಯೆಗೆ ಶರಣಾಗಿದ್ದಾರೆಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಗುರುವಾರ ಹೇಳಿದರು.

ಮಂಡ್ಯದ ಕೊನ್ನಾಪುರ ಗ್ರಾಮದಲ್ಲಿ ಮೈಕ್ರೋ ಫೈನಾನ್ಸ್‌ ಕಿರುಕುಳದಿಂದ ಆತ್ಮಹತ್ಯೆಗೆ ಶರಣಾದ ತಾಯಿ ಮತ್ತು ಮಗನ ಮನೆಗೆ ಗುರುವಾರ ಭೇಟಿ ನೀಡಿದ ಅಶೋಕ್ ಅವರು, ಕುಟುಂಬಕ್ಕೆ ಸಾಂತ್ವನ ಹೇಳಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಸುಗ್ರೀವಾಜ್ಞೆ ತರುತ್ತೇವೆಂದು ಹೇಳಿ ಒಂದು ತಿಂಗಳು ಕಳೆದಿದೆ. ಮಂಡ್ಯ ಜಿಲ್ಲೆಯಲ್ಲಿ ದಲಿತರ ಪ್ರದೇಶದಲ್ಲಿ 6 ಮಂದಿ ಊರು ಬಿಟ್ಟು ಹೋಗಿದ್ದಾರೆ. ರಾಜ್ಯದಲ್ಲಿ ಲಕ್ಷಾಂತರ ಜನರು ಗ್ರಾಮ ತೊರೆದಿದ್ದಾರೆ. 30 ಮಂದಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸರ್ಕಾರ ಸುಗ್ರೀವಾಜ್ಞೆ ತರಲಿಲ್ಲ ಎಂದರೆ, ಈ ಸಾವುಗಳು ನಿಲ್ಲುವುದಿಲ್ಲ ಎಂದು ಹೇಳಿದರು.

Also Read  ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕೃಷ್ಣಾಷ್ಟಮಿ ➤ ಬಳಿಕ ಮತ್ತೆ ಕಾಶಿಕಟ್ಟೆಯವರೆಗೆ ಮೆರವಣಿ

ಕೊನ್ನಾಪುರದಲ್ಲಿ ತಾಯಿ ಪ್ರೇಮಾ ಮತ್ತು ಮಗ ರಂಜಿತ್‌ ಮೈಕ್ರೋ ಫೈನಾನ್ಸ್‌ನ ಸಾಲ ತೀರಿಸಲಾಗದೆ ಕೊನ್ನಾಪುರ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಡವರ ಪರ ಎಂದು ಹೇಳುವ ಸಿಎಂ ಸಿದ್ದರಾಮಯ್ಯನವರಿಗೆ ಕಣ್ಣಿಲ್ಲ. ಕೊನ್ನಾಪುರ ಗ್ರಾಮದಲ್ಲಿ ಚಾಮುಂಡೇಶ್ವರಿ, ನವಚೇತನ, ಸೂರ್ಯೋದಯ, ಯುನಿಟಿ, ಪ್ರಗತಿ ಸೇರಿದಂತೆ 24 ಮೈಕ್ರೋ ಫೈನಾನ್ಸ್‌ಗಳು ಈ ಹಳ್ಳಿಗೆ ಬಂದು ವರ್ಷಕ್ಕೆ ಶೇ.12 ರಂತೆ ಸಾಲ ನೀಡಿವೆ. ಒಬ್ಬರಿಗೆ 9 ಜನರು ಶೂರಿಟಿ ನೀಡಿದ್ದಾರೆ. ಒಬ್ಬರು ಸಾಲ ಮರುಪಾವತಿ ಮಾಡಿಲ್ಲವೆಂದರೆ ಉಳಿದವರು ಹೊಣೆಯಾಗುತ್ತಾರೆ. ಸಾಲ ಕಟ್ಟದೆ ಮಾನ ಹೋದಾಗ ನೊಂದವರು ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ. ಪೊಲೀಸರು ಕೂಡ ಇಲ್ಲಿ ಮೈಕ್ರೋ ಫೈನಾನ್ಸ್‌ಗೆ ಬೆಂಬಲ ನೀಡಿದ್ದಾರೆ. ಮನೆ ವಶಕ್ಕೆ ಪಡೆಯುವ ಸಮಯದಲ್ಲಿ ಪೊಲೀಸರು ಕುಟುಂಬದ ಸದಸ್ಯರನ್ನು ಎಳೆದು ಹೊರಗೆ ಹಾಕಿದ್ದಾರೆ ಎಂದು ವ್ಯಕ್ತಪಡಿಸಿದರು.

Also Read  ನಾಳೆ (ಜ.15) ಸಚಿವರಾಗಿ ಮೊದಲ ಬಾರಿಗೆ ದ.ಕ. ಜಿಲ್ಲೆಗೆ ಭೇಟಿ ನೀಡಲಿರುವ ಎಸ್.ಅಂಗಾರ

error: Content is protected !!
Scroll to Top