ಜಮ್ಮು-ಕಾಶ್ಮೀರದ ಗಡಿಯಲ್ಲಿ ಪಾಕ್‌ನ 7 ಮಂದಿ ನುಸುಳುಕೋರರ ಹತ್ಯೆ

(ನ್ಯೂಸ್ ಕಡಬ) newskadaba.com , ಫೆ.07. ಬೆಂಗಳೂರು: ಜಮ್ಮು ಮತ್ತು ಕಾಶ್ಮೀರದ ಗಡಿಯಲ್ಲಿ ಭಾರಿ ಗುಂಡಿನ ಚಕಮಕಿ ನಡೆದಿದ್ದು, ಭಾರತೀಯ ಸೇನೆಯು 7 ಮಂದಿ ಪಾಕ್ ನುಸುಳುಕೋರರನ್ನು ಹತ್ಯೆ ಮಾಡಿದೆ.

ಉಗ್ರರು ಹಾಗೂ ಯೋಧರ ನಡುವೆ ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಕೃಷ್ಣ ಘಾಟಿ ಸೆಕ್ಟರ್‌ನಲ್ಲಿ ಗುಂಡಿನ ಚಕಮಕಿ ನಡೆದಿದೆ. ಮೃತ ಉಗ್ರರಲ್ಲಿ 2-3 ಪಾಕಿಸ್ತಾನಿ ಸೈನಿಕರಿರಬಹುದು ಎಂದು ಶಂಕೆ ವ್ಯಕ್ತಪಡಿಸಲಾಗಿದೆ. ಕಾರ್ಯಾಚರಣೆಯಲ್ಲಿ ಕೊಲ್ಲಲ್ಪಟ್ಟ ಭಯೋತ್ಪಾದಕರು ಬಹುಶಃ ಅಲ್-ಬದರ್ ಗುಂಪಿನ ಸದಸ್ಯರಾಗಿರಬಹುದು ಎಂದು ಹೇಳಲಾಗುತ್ತಿದೆ. ಫೆಬ್ರವರಿ 4-5ರ ಮಧ್ಯರಾತ್ರಿ ಎಲ್‌ಒಸಿಯಲ್ಲಿ ಪಾಕಿಸ್ತಾನಿ ನುಸುಳುಕೋರರ ಹೊಂಚುದಾಳಿಯನ್ನು ಭಾರತೀಯ ಸೇನೆ ವಿಫಲಗೊಳಿಸಿತು ಮತ್ತು 2-3 ಪಾಕಿಸ್ತಾನಿ ಸೇನಾ ಸಿಬ್ಬಂದಿ ಸೇರಿದಂತೆ ಏಳು ಜನರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಗಡಿಯಾಚೆಗಿನ ಕಾರ್ಯಾಚರಣೆಗಳಿಗಾಗಿ ವಿಶೇಷ ಘಟಕಗಳಾದ ಪಾಕಿಸ್ತಾನದ ಬಾರ್ಡರ್ ಆಕ್ಷನ್ ಟೀಮ್ (ಬಿಎಟಿ) ಪೋಸ್ಟ್ ಮೇಲೆ ದಾಳಿ ಮಾಡಲು ಪ್ರಯತ್ನಿಸುತ್ತಿದ್ದಾಗ ಭಾರತೀಯ ಸೇನೆಯು ಹೊಂಚು ಹಾಕಿ ದಾಳಿ ನಡೆದೆ ಎಂದು ಮೂಲಗಳು ತಿಳಿಸಿದೆ.

Also Read  ಬಿಜೆಪಿ ನಾಯಕನ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ

error: Content is protected !!
Scroll to Top