(ನ್ಯೂಸ್ ಕಡಬ) newskadaba.com , ಫೆ.08. ನವದೆಹಲಿ: ಬಹು ನಿರೀಕ್ಷಿತ ದೆಹಲಿ ಚುನಾವಣೆಯ ಮತ ಎಣಿಕೆ ಪ್ರಾರಂಭವಾಗಿದ್ದು, ಬಿಜೆಪಿ ಭಾರೀ ಮುನ್ನಡೆಯನ್ನು ಸಾಧಿಸಿದೆ. 70 ವಿಧಾನಸಭಾ ಕ್ಷೇತ್ರಗಳ ಪೈಕಿ 43 ಕ್ಷೇತ್ರಗಳಲ್ಲಿ ಬಿಜೆಪಿ ಪಕ್ಷ ಮುನ್ನಡೆಯಲ್ಲಿದ್ದು, ಆಪ್ 27 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಆದರೆ ಕಾಂಗ್ರೆಸ್ ಯಾವುದೇ ಕ್ಷೇತ್ರದಲ್ಲೂ ಮುನ್ನಡೆಯಲ್ಲಿಲ್ಲ.
ಶೂನ್ಯ ಸಾಧನೆಯನ್ನು ತೋರಿಸಿದೆ. ಪ್ರಬಲ ರಾಷ್ಟ್ರೀಯ ಪಕ್ಷವಾದ ಕಾಂಗ್ರೆಸ್ ರಾಷ್ಟ್ರ ರಾಜಧಾನಿ ಚುನಾವಣೆಯ ಎಲ್ಲಾ ಕ್ಷೇತ್ರಗಳಲ್ಲೂ ಹೀನಾಯವಾಗಿ ಸೋಲುವ ಸಾಧ್ಯತೆಯಿದೆ. ಈ ಬಾರಿ ಮತದಾರ ಬಿಜೆಪಿ ಕೈ ಹಿಡಿಯುವ ಸಾಧ್ಯತೆಯಿದೆ. ಕಾಂಗ್ರೆಸ್ ಕರ್ನಾಟಕ ಮಾದರಿಯ ಗ್ಯಾರಂಟಿ ಯೋಜನೆಗಳನ್ನು ತನ್ನ ಪ್ರಣಾಳಿಕೆಯಲ್ಲಿ ಘೋಷಿಸಿದರೂ ಮತದಾರ ಕೈಬಿಟ್ಟಿದ್ದಾನೆ.