(ನ್ಯೂಸ್ ಕಡಬ) newskadaba.com, ಫೆ.12. ಬೆಂಗಳೂರು: ಮೈಸೂರಿನಲ್ಲಿ ತನ್ನ ಉತ್ಪಾದನೆ ಮತ್ತು ಎಂಜಿನಿಯರಿಂಗ್ ಕಾರ್ಯಾಚರಣೆಗಳನ್ನು ವಿಸ್ತರಿಸುವುದರ ಜೊತೆಗೆ ಕರ್ನಾಟಕದಲ್ಲಿ ಜಾಗತಿಕ ಸಾಮರ್ಥ್ಯ ಕೇಂದ್ರವನ್ನು ಸ್ಥಾಪಿಸುವುದಾಗಿ ಟಿವಿಎಸ್ ಮೋಟಾರ್ ಕಂಪನಿ ಹೇಳಿದೆ.
![](https://i0.wp.com/newskadaba.com/wp-content/uploads/2024/11/Pilya-Scheme.gif?resize=1200%2C1698&ssl=1)
![](https://i0.wp.com/newskadaba.com/wp-content/uploads/2024/10/1001612748.jpg?resize=904%2C1280&ssl=1)
![](https://i0.wp.com/newskadaba.com/wp-content/uploads/2022/12/Adiga-TVS.gif?resize=1200%2C771&ssl=1)
ಕಂಪನಿಯು ರಾಜ್ಯದಲ್ಲಿ ಪರೀಕ್ಷಾ ಟ್ರ್ಯಾಕ್ ಅನ್ನು ನಿರ್ಮಿಸುತ್ತದೆ ಮತ್ತು ರಾಜ್ಯದಲ್ಲಿ ಹೊಸ ಕೇಂದ್ರಗಳನ್ನು ಆರಂಭಿಸಲು ಮೂಲಸೌಕರ್ಯವನ್ನು ಅಭಿವೃದ್ಧಿಪಡಿಸಲಿದೆ ಎಂದು ಟಿವಿಎಸ್ ಹೇಳಿದೆ. ಬೆಂಗಳೂರಿನಲ್ಲಿ ನಡೆಯುತ್ತಿರುವ ಜಾಗತಿಕ ಹೂಡಿಕೆದಾರರ ಸಮಾವೇಶ(ಜಿಐಎಂ) ಇನ್ವೆಸ್ಟ್ ಕರ್ನಾಟಕ 2025 ಉದ್ಘಾಟನಾ ಸಮಾರಂಭದಲ್ಲಿ ಟಿವಿಎಸ್ ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಸುದರ್ಶನ್ ವೇಣು ಅವರು ಕಂಪನಿಯ ಯೋಜನೆಯನ್ನು ವಿವರಿಸಿದರು.