(ನ್ಯೂಸ್ ಕಡಬ) newskadaba.com ಫೆ. 13. ಬೆಂಗಳೂರು: ಇಂದಿನಿಂದ ಸಾರ್ವಜನಿಕರಿಗೆ ಏರ್ ಶೋ ವೀಕ್ಷಣೆಗೆ ಅವಕಾಶ ಸಿಗಲಿದೆ.ಯಲಹಂಕದಲ್ಲಿ ನಡೆಯುತ್ತಿರುವ ಏರ್ ಶೋಗೆ ಇಂದು, ನಾಳೆ ಲಕ್ಷಾಂತರ ಜನ ಭಾಗಿಯಾಗುವ ಸಾಧ್ಯತೆ ಇದೆ. ಮೊದಲ ಮೂರು ದಿನ ಕೇವಲ ಅಡ್ವಾ ಪ್ರದೇಶಕ್ಕೆ ಮಾತ್ರ ಸಾರ್ವಜನಿಕರಿಗೆ ಅವಕಾಶ ನೀಡಲಾಗಿತ್ತು. ಇಂದಿನಿಂದ ಎರಡು ದಿನ ಸಂಪೂರ್ಣ ಏರೋ ಇಂಡಿಯಾ ಸಾರ್ವಜನಿಕ ವೀಕ್ಷಣೆಗೆ ಮುಕ್ತವಾಗಲಿದೆ.
ಒಂದು ಸಾವಿರ, ಎರಡೂವರೆ ಸಾವಿರಕ್ಕೆ ಟಿಕೆಟ್ ಪಡೆದವರು ಸಂಪೂರ್ಣ ಏರೋ ಇಂಡಿಯಾ ವೀಕ್ಷಣೆಗೆ ಅವಕಾಶ ಇರಲಿದೆ. ಇಂದು ಕೂಡ ಬೆಳಗ್ಗೆ 9:30 ರಿಂದ 12 ಮತ್ತು ಮಧ್ಯಾಹ್ನ 2:30 ರಿಂದ ಸಂಜೆ 5 ಗಂಟೆ ವರೆಗೆ ಏರ್ ಶೋ ಎರಡು ಪ್ರದರ್ಶನ ಇರಲಿದೆ. ಸೂರ್ಯಕಿರಣ, ಆಮೆರಿಕದ ಎಫ್ 35, ರಷ್ಯಾದ ಎಸ್‌ಯು 57, ತೇಜಸ್ ಎಲ್ಸಿಎ, ಎಲ್ಯುಹೆಚ್ ಹೆಲಿಕಾಪ್ಟರ್ ಪ್ರದರ್ಶನ ಕಣ್ಮನ ಸೆಳೆಯಲಿದೆ. ಎರಡೂವರೆ ಸಾವಿರ, 5 ಸಾವಿರ ಟಿಕೆಟ್ ಪಡೆದವರಿಗೆ ಕಾರ್ಯಕ್ರಮ ಪ್ರದೇಶದ ಹೊರಭಾಗ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ.