ಶ್ವೇತಭವನದಲ್ಲಿ ಮೋದಿ-ಟ್ರಂಪ್ ಭೇಟಿ; ಮಹತ್ವದ ವ್ಯಾಪಾರ ಒಪ್ಪಂದಕ್ಕೆ ಸಹಿ

(ನ್ಯೂಸ್ ಕಡಬ) newskadaba.com ಫೆ. 14. ವಾಷಿಂಗ್ಟನ್: ಅಮೆರಿಕ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ನೂತನ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿ ಒಪ್ಪಂದಕ್ಕ ಸಹಿ ಹಾಕಿದ್ದಾರೆ. ನಿನ್ನೆ ಶ್ವೇತ ಭವನಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಟ್ರಂಪ್ ಅದ್ದೂರಿ ಸ್ವಾಗತ ಕೋರಿದ್ದು, ಬಳಿಕ ಉಭಯ ನಾಯಕರು ಜಂಟಿ ಸುದ್ದಿಗೋಷ್ಠಿಯಲ್ಲಿ ಭಾಗವಹಿಸಿದರು. ಈ ವೇಳೆ ವಿದೇಶಾಂಗ ಸಚಿವ ಡಾ. ಎಸ್ ಜೈಶಂಕರ್ ಮತ್ತು ದೇಶದ ರಾಷ್ಟ್ರೀಯ ಭದ್ರತಾ ಸಲಹೆಗಾರ (ಎನ್‌ಎಸ್‌ಎ) ಅಜಿತ್ ದೋವಲ್ ಕೂಡ ಉಪಸ್ಥಿತರಿದ್ದರು.

Also Read  ಕಡಬದಲ್ಲಿ ಬಗೆಹರಿಯದ ಬಿಎಸ್ಎನ್ಎಲ್ ನೆಟ್ ವರ್ಕ್ ಸಮಸ್ಯೆ ► ಗ್ರಾಹಕರಿಂದ ಪ್ರತಿಭಟನೆಯ ಕರೆಘಂಟೆ

2030 ರ ವೇಳೆಗೆ ಭಾರತ-ಅಮೆರಿಕ ವ್ಯಾಪಾರವನ್ನು ದ್ವಿಗುಣಗೊಳಿಸುವ ಬಗ್ಗೆ ಪ್ರಧಾನಿ ಮಾತನಾಡಿದರು. 2030 ರ ವೇಳೆಗೆ ನಮ್ಮ ದ್ವಿಪಕ್ಷೀಯ ವ್ಯಾಪಾರವನ್ನು ದ್ವಿಗುಣಗೊಳಿಸಿ 500 ಶತಕೋಟಿ ಡಾಲರ್‌ಗೆ ಹೆಚ್ಚಿಸುವ ಗುರಿಯನ್ನು ನಾವು ಹೊಂದಿದ್ದೇವೆ ಎಂದು ಅವರು ಹೇಳಿದರು.

error: Content is protected !!
Scroll to Top