(ನ್ಯೂಸ್ ಕಡಬ) newskadaba.com ಫೆ. 14. ಬೆಂಗಳೂರು: 2023-24 ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್ ಹುದ್ದೆಗಳ ನೇಮಕಾತಿಯ ಮುಖ್ಯ ಪರೀಕ್ಷೆಗೆ (KAS Mains Examination) ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.
![](https://i0.wp.com/newskadaba.com/wp-content/uploads/2024/11/Pilya-Scheme.gif?resize=1200%2C1698&ssl=1)
![](https://i0.wp.com/newskadaba.com/wp-content/uploads/2024/10/1001612748.jpg?resize=904%2C1280&ssl=1)
![](https://i0.wp.com/newskadaba.com/wp-content/uploads/2022/12/Adiga-TVS.gif?resize=1200%2C771&ssl=1)
2024ರ ಫೆ. 26ರಂದು ಅಧಿಸೂಚನೆ ಹೊರಡಿಸಿದ್ದ ಗೆಜೆಟೆಡ್ ಪ್ರೊಬೇಷನರ್ ಗ್ರೂಪ್ – ಎ ಮತ್ತು ಗ್ರೂಪ್ – ಬಿ ವೃಂದದ 384 ಹುದ್ದೆಗಳಿಗೆ ಡಿ.29ರಂದು ಪೂರ್ವಭಾವಿ ಮರುಪರೀಕ್ಷೆ ನಡೆಸಲಾಗಿತ್ತು. ಆಯೋಗವು ಪೂರ್ವಭಾವಿ ಪರೀಕ್ಷೆಯಿಂದ ಮುಖ್ಯ ಪರೀಕ್ಷೆಗೆ 1:15 ಅನುಪಾತದಲ್ಲಿ ಅರ್ಹರಾದ ಅಭ್ಯರ್ಥಿಗಳ ಅರ್ಹತಾ ಪಟ್ಟಿಯನ್ನು ಫೆ.10 ರಂದು ಪ್ರಕಟಿಸಿತ್ತು. ಇದೀಗ ಮುಖ್ಯ ಪರೀಕ್ಷೆಗೆ (KAS Mains Exam) ಆನ್‌ಲೈನ್ ಮೂಲಕ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಕೆಪಿಎಸ್‌ಸಿ ವೆಬ್‌ಸೈಟ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.