(ನ್ಯೂಸ್ ಕಡಬ) newskadaba.com ಫೆ. 14. ನವದೆಹಲಿ: ಐಟಿ ಉದ್ಯೋಗಿಗಳ ಕಲ್ಯಾಣ ಸಂಘ ಕಳವಳ ವ್ಯಕ್ತಪಡಿಸಿರುವುದನ್ನು ಅನುಸರಿಸಿ, ಇನ್ಫೋಸಿಸ್ ಮೈಸೂರಿನ ಕ್ಯಾಂಪಸ್‌ನಲ್ಲಿ ನಡೆಯುತ್ತಿರುವ ಸಾಮೂಹಿಕ ವಜಾಗೊಳಿಸುವಿಕೆ ವಿರುದ್ಧ ತುರ್ತು ಕ್ರಮ ಕೈಗೊಳ್ಳಬೇಕು ಎಂದು ಕೇಂದ್ರ ಸರ್ಕಾರ, ಕರ್ನಾಟಕ ಸರ್ಕಾರಕ್ಕೆ ಸೂಚಿಸಿದೆ.
![](https://i0.wp.com/newskadaba.com/wp-content/uploads/2024/11/Pilya-Scheme.gif?resize=1200%2C1698&ssl=1)
![](https://i0.wp.com/newskadaba.com/wp-content/uploads/2024/10/1001612748.jpg?resize=904%2C1280&ssl=1)
![](https://i0.wp.com/newskadaba.com/wp-content/uploads/2022/12/Adiga-TVS.gif?resize=1200%2C771&ssl=1)
ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ, ರಾಜ್ಯ ಕಾರ್ಮಿಕ ಇಲಾಖೆಗೆ ಈ ಸಮಸ್ಯೆ ಪರಿಹರಿಸಲು “ತುರ್ತು ಮತ್ತು ಅಗತ್ಯ ಕ್ರಮಗಳನ್ನು” ತೆಗೆದುಕೊಳ್ಳುವಂತೆ ಸೂಚಿಸಿದೆ. ಐಟಿ ನೌಕರರ ಕಲ್ಯಾಣ ಸಂಘವಾದ ಎನ್‌ಐಟಿಇಎಸ್ ದೂರಿನ ಮೇರೆಗೆ ಈ ಸೂಚನೆಯನ್ನು ನೀಡಿದೆ. ಮುಖ್ಯ ಕಾರ್ಮಿಕ ಆಯುಕ್ತರ ಕಚೇರಿ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದು, ಸಾಮೂಹಿಕ ವಜಾ ವಿಚಾರದಲ್ಲಿ ಕರ್ನಾಟಕ ಮಧ್ಯಪ್ರವೇಶಿಸಿ ವಿವಾದವನ್ನು ಪರಿಹರಿಸಬೇಕು ನಿರ್ದೇಶನ ನೀಡಿದೆ. ಅಲ್ಲದೆ ದೂರುದಾರರಿಗೆ ಈ ಬಗ್ಗೆ ಮಾಹಿತಿ ನೀಡುವಂತೆ ಸೂಚಿಸಿದೆ.