(ನ್ಯೂಸ್ ಕಡಬ) newskadaba.com ಫೆ. 20. ಮಂಗಳೂರು: ಶಾಲೆಗಳಲ್ಲಿ ರಂಗೋತ್ಸವ ಎಂಬ ಮನರಂಜನಾ ಕಾರ್ಯಕ್ರಮ ನಡೆಸಲು ರಾಜ್ಯ ಕಾಂಗ್ರೆಸ್ ಸರ್ಕಾರ ಮುಂದಾಗಿರುವ ವಿಚಾರ ಕರವಾಳಿ ಭಾಗದಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ.

ಸದ್ಯ ವಿಚಾರದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ದೊಡ್ಡ ಮಟ್ಟಿನ ಚರ್ಚೆಗಳು ನಡೆಯುತ್ತಿದೆ. ದೈವಾರಾಧಕರಿಂದ ಹಿಡಿದು ದೈವದ ಚಾಕರಿ ಮಾಡುವ ಎಲ್ಲಾ ಬಂಧುಗಳು, ಹಿಂದೂ ಸಂಘಟನೆಗಳು ಸೇರಿದಂತೆ ಬಿಜೆಪಿ ಈ ಬಗ್ಗೆ ದೊಡ್ಡ ಮಟ್ಟದಲ್ಲಿ ಹೋರಾಟ ಮಾಡಲಿದ್ದೇವೆ ಎಂದು ಶಾಸಕ ವೇದವ್ಯಾಸ ಕಾಮತ್ ಹೇಳಿದ್ದಾರೆ.ಶಾಲೆಗಳಲ್ಲಿ ರಂಗೋತ್ಸವ ಎಂಬ ಮನರಂಜನಾ ಕಾರ್ಯಕ್ರಮ ನಡೆಸಲು ರಾಜ್ಯ ಕಾಂಗ್ರೆಸ್ ಸರ್ಕಾರ ಮುಂದಾಗಿರುವ ವಿಚಾರದ ಬಗ್ಗೆ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.