ಫೆ. 25ರಂದು ಕೇಂದ್ರ ಜಲಶಕ್ತಿ ಸಚಿವರ ಭೇಟಿ ಮಾಡಲಿರುವ ಡಿಸಿಎಂ: ಮೇಕೆದಾಟು, ಮಹದಾಯಿ ಸೇರಿ ನೀರಾವರಿ ಯೋಜನೆಗಳ ಕುರಿತು ಚರ್ಚೆ

(ನ್ಯೂಸ್ ಕಡಬ) newskadaba.com ಫೆ. 20. ಉದಯಪುರ: ಫೆಬ್ರವರಿ 25 ರಂದು ಕೇಂದ್ರ ಜಲಶಕ್ತಿ ಸಚಿವ ಸಿಆರ್ ಪಾಟೀಲ್ ಅವರನ್ನು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಭೇಟಿ ಮಾಡಲಿದ್ದು, ಭೇಟಿ ವೇಳೆ ಮೇಕೆದಾಟು, ಮಹದಾಯಿ ಸೇರಿ ನೀರಾವರಿ ಯೋಜನೆಗಳ ಕುರಿತು ಚರ್ಚೆ ನಡೆಸಲಿದ್ದಾರೆಂದು ತಿಳಿದುಬಂದಿದೆ.

ಉದಯಪುರದಲ್ಲಿ ಕೆಂದ್ರ ಜಲಶಕ್ತಿ ಸಚಿವಾಲಯ ನಡೆಸುತ್ತಿರುವ ಅಖಿಲ ಭಾರತ ರಾಜ್ಯಗಳ ಜಲಸಂಪನ್ಮೂಲ ಸಚಿವರ ಸಮ್ಮೇಳನದಲ್ಲಿ ಶಿವಕುಮಾರ್ ಅವರು ಭಾಗಿಯಾಗಿದ್ದರು.

ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೇಂದ್ರ ಜಲಶಕ್ತಿ ಸಚಿವರನ್ನು ಭೇಟಿ ಮಾಡಿ, ಈ ಹಿಂದೆ ಘೋಷಿಸಲಾಗಿರುವ ಅನುದಾನ ಹಾಗೂ ಮಹದಾಯಿ, ಮೇಕೆದಾಟು ಹಾಗೂ ಕೃಷ್ಮಾ ಮೇಲ್ದಂಡೆ ಯೋಜನೆಗಳ ಬಗ್ಗೆ ಚರ್ಚೆ ಮಾಡಲಾಗುವುದು. ಕೇಂದ್ರ ಸರ್ಕಾರದಿಂದ ಸಕಾರಾತ್ಮಕವಾಗಿ ಸ್ಪಂದನೆ ಸಿಗುವ ವಿಶ್ವಾಸವಿದೆ ಎಂದು ಹೇಳಿದರು.

error: Content is protected !!
Scroll to Top