(ನ್ಯೂಸ್ ಕಡಬ) newskadaba.com ಫೆ. 20. ಬೆಂಗಳೂರು: ಜೀವನ್ ಭೀಮಾ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ತಿಪ್ಪಸಂದ್ರದಲ್ಲಿ 2 ಅಂತಸ್ತಿನ ಕಟ್ಟಡ ಏಕಾಏಕಿ ಕುಸಿದ ಘಟನೆ ಬುಧವಾರ ನಡೆದಿದ್ದು, ಘಟನೆಯಲ್ಲಿ ಯಾವುದೇ ಪ್ರಾಣಹಾನಿ ವರದಿಯಾಗಿಲ್ಲ.

ಕಟ್ಟಡದ ಪಕ್ಕದಲ್ಲಿ ಮತ್ತೊಂದು ಕಟ್ಟಡಕ್ಕೆ ಪಾಯ ತೆಗೆಯುತ್ತಿದ್ದ ವೇಳೆ ಘಟನೆ ಸಂಭವಿಸಿದೆ. ಸಂಜೆ 4:58ರ ಸುಮಾರಿಗೆ ಕಟ್ಟಡ ಕುಸಿದಿದೆ. ಮನೆ ವಾಲುತ್ತಿರುವ ಕುರಿತು ಅಗ್ನಿಶಾಮಕ ದಳ ಹಾಗೂ ಪೊಲೀಸರಿಗೆ ಕರೆ ಬಂದಿದ್ದು, ಕೂಡಲೇ ಎರಡು ಅಗ್ನಿಶಾಮಕ ದಳದ ವಾಹನಗಳು ಎಸ್‌ಡಿಆರ್‌ಎಫ್ ತಂಡದೊಂದಿಗೆ ಸ್ಥಳಕ್ಕೆ ಧಾವಿಸಿ, ಮನೆಯಲ್ಲಿದ್ದವರನ್ನು ಹೊರಗೆ ಕಳುಹಿಸಿದೆ. ಪರಿಣಾಮ ಯಾವುದೇ ಸಾವು-ನೋವುಗಳು ಸಂಭವಿಸಿಲ್ಲ. ಹಳೆಯ ಕಟ್ಟಡವಾಗಿದ್ದು, ಪಕ್ಕದ ಕಟ್ಟಡಕ್ಕೆ ಪಾಯ ಹಾಕುವ ವೇಳೆ ಈ ಕಟ್ಟಡದ ಪಾಯ ದುರ್ಬಲಗೊಂಡಿದೆ. ಇದೀಗ ಕಟ್ಟಡದ ಅವಶೇಷಗಳನ್ನು ತೆರವುಗೊಳಿಸುವ ಕಾರ್ಯ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.