(ನ್ಯೂಸ್ ಕಡಬ) newskadaba.com ಫೆ. 21. ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ಅಡಿಯಲ್ಲಿ ಮಹಿಳೆಯರಿಗೆ ಉಚಿತ ಸಾರಿಗೆ ವ್ಯವಸ್ಥೆ ಆರಂಭವಾದ ನಂತರ, ಬಸ್ಸುಗಳಲ್ಲಿ ಪುರುಷ ಪ್ರಯಾಣಿಕರಿಗೆ ಸ್ಥಳ ಇಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ. ಇದಕ್ಕೆ ಸಂಬಂಧಿಸಿದಂತೆ, ಇತ್ತೀಚೆಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಮೈಸೂರಿನಲ್ಲಿ ಹೊಸ ಆದೇಶವನ್ನು ಹೊರಡಿಸಿದೆ.



ಈ ಆದೇಶದ ಪ್ರಕಾರ, ಈಗಿನಿಂದ ಪುರುಷರಿಗೆ ಮೀಸಲಾದ ಸೀಟುಗಳಲ್ಲಿ ಮಹಿಳಾ ಪ್ರಯಾಣಿಕರು ಕುಳಿತುಕೊಳ್ಳದಂತೆ ಗಮನ ಹರಿಸಲು ಮತ್ತು ಪುರುಷ ಪ್ರಯಾಣಿಕರಿಗೆ ಮೀಸಲಾದ ಸೀಟುಗಳನ್ನು ನೀಡಲು ಎಲ್ಲ ಚಾಲಕರಿಗೆ ಸೂಚನೆ ನೀಡಲಾಗಿದೆ. ಮೈಸೂರಿನ ಸ್ಥಳೀಯ ವಾಹನಗಳಲ್ಲಿ ಮಹಿಳಾ ಪ್ರಯಾಣಿಕರು ಪುರುಷರಿಗೆ ಮೀಸಲಾದ ಸೀಟುಗಳಲ್ಲಿ ಪ್ರಯಾಣಿಸುತ್ತಿರುವುದನ್ನು ಕಂಡು, ಇದರ ಬಗ್ಗೆ ಕೆಎಸ್‌ಆರ್‌ಟಿಸಿ ಮೈಸೂರಿನ ನಿಯಂತ್ರಣಾಧಿಕಾರಿಯಿಂದ ಅಧಿಕೃತವಾಗಿ ಆದೇಶ ಹೊರಡಿಸಲಾಗಿದೆ.