ಪಣಂಬೂರು: ನಿಲ್ಲಿಸಿದ್ದ ಲಾರಿಗೆ ಇನ್ನೋವಾ ಢಿಕ್ಕಿ ► ಓರ್ವ ಮೃತ್ಯು, ಹಲವರು ಗಂಭೀರ



(ನ್ಯೂಸ್ ಕಡಬ) newskadaba.com ಮಂಗಳೂರು, ಮಾ.29. ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದ ಟ್ಯಾಂಕರ್‌ಗೆ ಇನ್ನೋವಾ ಕಾರೊಂದು ಢಿಕ್ಕಿಯಾದ ಪರಿಣಾಮ ಓರ್ವ ಮೃತಪಟ್ಟು, ಎಂಟು ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ಗುರುವಾರದಂದು ಪಣಂಬೂರಿನಲ್ಲಿ‌ ನಡೆದಿದೆ.







ಮೃತ ವ್ಯಕ್ತಿಯನ್ನು ಇನ್ನೋವಾ ಕಾರು ಚಾಲಕ ಬೆಳಗಾವಿಯ ಹನುಮಂತಯ್ಯ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಪ್ರಯಾಣಿಕರು ಗಂಭೀರ ಗಾಯಗೊಂಡಿದ್ದು, ಗಾಯಾಳುಗಳನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಳಗಾವಿ ಮೂಲದವರು ಪ್ರಯಾಣಿಸುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಟ್ಯಾಂಕರ್ ಗೆ ಢಿಕ್ಕಿ ಹೊಡೆದಿದ್ದರಿಂದಾಗಿ ಈ ಅವಘಡ ಸಂಭವಿಸಿದ್ದು, ಘಟನೆಯ ತೀವ್ರತೆಗೆ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಸ್ಥಳಕ್ಕೆ ಮಂಗಳೂರು ಉತ್ತರ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.






error: Content is protected !!
Scroll to Top