(ನ್ಯೂಸ್ ಕಡಬ) newskadaba.com ಫೆ. 24. ಅಪ್ರಾಪ್ತ ವಿದ್ಯಾರ್ಥಿನಿಯನ್ನು ಸೆಕ್ಯೂರಿಟಿ ಗಾರ್ಡ್ ಪುಸಲಾಯಿಸಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರವೆಸಗಿ ಪರಾರಿಯಾಗಿರುವ ಘಟನೆ ಎಚ್‌ಎಎಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.


ಎಸ್‌ಎಸ್‌ಎಲ್‌ಸಿ ವ್ಯಾಸಾಂಗ ಮಾಡುತ್ತಿರುವ 17 ವರ್ಷದ ಈ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ವೆಸಗಿರುವ ಆರೋಪಿ ಸೆಕ್ಯೂರಿಟಿ ಗಾರ್ಡ್ ವಿರುದ್ದ ಬಾಲಕಿಯ ತಾಯಿ ಎಚ್ ಎಎಲ್ ಠಾಣೆಗೆ ದೂರು ನೀಡಿದ್ದಾರೆ. ಸೆಕ್ಯೂರಿಟಿ ಗಾರ್ಡ್ ವಿರುದ್ಧ ಪೋಕೋ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆತನಿಗಾಗಿ ಶೋಧ ಕೈಗೊಂಡಿದ್ದಾರೆ.