(ನ್ಯೂಸ್ ಕಡಬ) newskadaba.com ಫೆ. 25: ಕರ್ನಾಟಕ ಅರಣ್ಯ ಇಲಾಖೆಯ 150 ಕೋಟಿ ರೂಪಾಯಿಗಳಿಗೂ ಅಧಿಕ ಮೌಲ್ಯದ ಸ್ವತ್ತನ್ನು ಕಾನೂನುಬಾಹಿರವಾಗಿ ಸ್ವಾಧೀನದಲ್ಲಿರಿಸಿಕೊಂಡಿರುವ ಆರೋಪದಡಿ ಕಾಂಗ್ರೆಸ್‌ನ ಸಾಗರೋತ್ತರ ಘಟಕದ ಅಧ್ಯಕ್ಷ ಸ್ಯಾಮ್ ಪಿತ್ರೋಡಾ ಸೇರಿದಂತೆ ಆರು ಜನರ ವಿರುದ್ಧ ಜಾರಿ ನಿರ್ದೇಶನಾಲಯ (ಇ.ಡಿ) ಹಾಗೂ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಾಗಿದೆ.


ಸ್ಯಾಮ್ ಪಿತ್ರೋಡಾ, ಕರ್ನಾಟಕ ರಾಜ್ಯ ಅರಣ್ಯ ಮತ್ತು ಪರಿಸರ ಇಲಾಖೆಯ ಮಾಜಿ ಅಪರ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್, ಪ್ರಧಾನ ಅರಣ್ಯ ಸಂರಕ್ಷಣಾಧಿಕಾರಿಗಳಾದ ಆರ್.ಕೆ. ಸಿಂಗ್ ಮತ್ತು ಸಂಜಯ್ ಮೋಹನ್, ಕರ್ನಾಟಕ ರಾಜ್ಯ ಅರಣ್ಯ ಇಲಾಖೆಯ ಬೆಂಗಳೂರು ನಗರ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳಾದ ಎನ್.ರವೀಂದ್ರ ಕುಮಾರ್ ಮತ್ತು ಎಸ್.ಎಸ್.ರವಿಶಂಕರ್ ವಿರುದ್ಧ ಬಿಜೆಪಿ ದಕ್ಷಿಣ ಜಿಲ್ಲಾ ಘಟಕದ ಅಧ್ಯಕ್ಷ ಎನ್.ಆರ್.ರಮೇಶ್ ಅವರು ದಾಖಲೆಗಳಸಹಿತ ದೂರು ದಾಖಲಿಸಿದ್ದಾರೆ.