(ನ್ಯೂಸ್ ಕಡಬ) newskadaba.com ಫೆ. 25: ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ಕೂಡಲೇ ಚುನಾವಣೆ ನಡೆಸಬೇಕೆಂದು ನಿರ್ದೇಶಿಸಲು ಕೋರಿ ಬಿಜೆಪಿಯು ಸುಪ್ರೀಂ ಕೋರ್ಟಿಗೆ ಮನವಿ ಸಲ್ಲಿಸಿದೆ.


ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ.ವಿಜಯೇಂದ್ರ ಅವರು ಈ ಸಂಬಂಧ ಸಮಿತಿಯೊಂದನ್ನು ರಚಿಸಿದ್ದರು. ಈ ಸಮಿತಿಯು ಹಿರಿಯ ವಕೀಲರಾದ ಸಂದೀಪ್ ಪಾಟೀಲ್ ಅವರ ಮೂಲಕ ಸುಪ್ರೀಂ ಕೋರ್ಟಿಗೆ ವಕಾಲತ್ತು ಸಲ್ಲಿಸಿ ಮನವಿ ಮಾಡಿದೆ.