(ನ್ಯೂಸ್ ಕಡಬ) newskadaba.com ಫೆ. 25 ಬಂಟ್ವಾಳ: 1984ರ ಸಿಖ್ ವಿರೋಧಿ ದಂಗೆ ಪ್ರಕರಣದಲ್ಲಿ ಕಾಂಗ್ರೆಸ್‌ನ ಮಾಜಿ ಸಂಸದ ಸಜ್ಜನ್ ಕುಮಾರ್ ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಿ ಕೋರ್ಟ್ ತೀರ್ಪು ನೀಡಿದೆ.


ಸರಸ್ವತಿ ವಿಹಾರ್ ಹತ್ಯೆಗಳಲ್ಲಿ ಸಜ್ಜನ್ ಕುಮಾರ್ ಅವರ ಪಾತ್ರದ ಬಗ್ಗೆ ದೆಹಲಿ ನ್ಯಾಯಾಲಯ ಈ ತೀರ್ಪು ನೀಡಿದ್ದು, ಇದು ಅವರ ಎರಡನೇ ಜೀವಾವಧಿ ಶಿಕ್ಷೆಯಾಗಿದೆ. ಸಜ್ಜನ್ ಕುಮಾರ್‌ಗೆ ವಿಶೇಷ ಕೋರ್ಟ್ ನ್ಯಾಯಾಧೀಶೆ ಕಾವೇರಿ ಬವೇಜಾ ಶಿಕ್ಷೆ ಪ್ರಮಾಣ ಪ್ರಕಟಿಸಿದ್ದಾರೆ. ಇನ್ನು ದೆಹಲಿಯ ರೋಸ್ ಅವೆನ್ಯೂ ರಸ್ತೆಯಲ್ಲಿರುವ ವಿಶೇಷ ನ್ಯಾಯಾಲಯ ಸಜ್ಜನ್ ಕುಮಾರ್ ಅಪರಾಧಿ ಎಂದು ಫೆ. 12ರಂದು ತೀರ್ಪು ನೀಡಿತ್ತು. 1984ರಲ್ಲಿ ಸಿಖ್ ವಿರೋಧಿ ದಂಗೆ ವೇಳೆ ಇಬ್ಬರನ್ನು ಕೊಲೆ ಮಾಡಿದ್ದ ಪ್ರಕರಣದಲ್ಲಿ ಈ ಶಿಕ್ಷೆ ವಿಧಿಸಲಾಗಿತ್ತು. ಸಜ್ಜನ್ ಕುಮಾರ್ ಅವರ ಮೇಲೆ ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ಹತ್ಯೆಗೆ ಸೇಡು ತೀರಿಸಿಕೊಳ್ಳಲು ಶಸ್ತ್ರಾಸ್ತ್ರಗಳನ್ನು ಹೊಂದಿದ್ದ ಬೃಹತ್ ಗುಂಪನ್ನು ಮುನ್ನಡೆಸಿದ್ದಾರೆ ಎಂದು ಆರೋಪವಿದೆ. ದೂರಿನ ಅನುಸಾರ, ಕೋಪಗೊಂಡ ಗುಂಪೊಂದು ದೂರುದಾರ ಜಸ್ವಂತ್ ಅವರ ಪತ್ನಿಯ ಮನೆಯ ಮೇಲೆ ದಾಳಿ ಮಾಡಿ, ಅವರ ಪತಿ ಮತ್ತು ಮಗನನ್ನು ಹತ್ಯೆ ಮಾಡಿತ್ತು. ನವೆಂಬರ್ 1, 1984ರಂದು ಜಸ್ವಂತ್ ಸಿಂಗ್ ಮತ್ತು ಅವರ ಮಗ ತರುಣದೀಪ್ ಸಿಂಗ್ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಜ್ಜನ್ ಅವರಿಗೆ ಶಿಕ್ಷೆ ನೀಡಲಾಯಿತು.