ಶ್ರೀಘ್ರದಲ್ಲೇ ರಾಜ್ಯದಲ್ಲಿ ಕ್ಷಿಪ್ರ ರಾಜಕೀಯ ಬೆಳವಣಿಗೆ : ವಿಜಯೇಂದ್ರ ಮುನ್ಸೂಚನೆ

(ನ್ಯೂಸ್ ಕಡಬ) newskadaba.com ಫೆ. 27 ಬೆಂಗಳೂರು: ಕಾಂಗ್ರೆಸ್‌ನಲ್ಲಿ ದಿನೇ ದಿನೇ ಒಳಜಗಳ ಹೆಚ್ಚಾಗುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಕ್ಷಿಪ್ರ ರಾಜಕೀಯ ಬೆಳವಣಿಗೆ ನಡೆಯಲಿದೆ. ಅದಕ್ಕೆ ಈಗ ನಡೆಯುತ್ತಿರುವ ಬೆಳವಣಿಗೆಗಳು ಮುನ್ಸೂಚನೆಯಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿದ್ದಾರೆ.


ಕೇಂದ್ರ ಗೃಹ ಸಚಿವ ಅಮಿತ್ ಷಾ ಜತೆ ಡಿಕೆಶಿ ವೇದಿಕೆ ಹಂಚಿಕೊಂಡಿದ್ದಕ್ಕೆ ಕಾಂಗ್ರೆಸ್ ನಲ್ಲಿ ಆಕ್ಷೇಪ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಶಿವರಾತ್ರಿಯ ಸಂದರ್ಭದಲ್ಲಿ ಇಶಾ ಫೌಂಡೇಶನ್ ಕಾರ್ಯಕ್ರಮದಲ್ಲಿ ಡಿಕೆಶಿ ಭಾಗವಹಿಸಿದ್ದರು. ಅದೊಂದು ಧಾರ್ಮಿಕ ಕಾರ್ಯಕ್ರಮ, ಶಿವರಾತ್ರಿ ಸಂದರ್ಭದಲ್ಲಿ ಹೋಗಿದ್ದಾರೆ. ಅದಕ್ಕೆ ಡಿಕೆಶಿ ಅವರೇ ಉತ್ತರ ಕೊಡಬೇಕು ಎಂದು ಹೇಳಿದರು.

error: Content is protected !!
Scroll to Top