(ನ್ಯೂಸ್ ಕಡಬ) newskadaba.com ಫೆ. 28 ಬೆಂಗಳೂರು: ಭಾರತೀಯ ಷೇರುಪೇಟೆ ನಿಯಂತ್ರಣ ಮಂಡಳಿ(ಸೆಬಿ) ಮುಖ್ಯಸ್ಥರಾಗಿ ತುಹಿನ್ ಕಾಂತ ಪಾಂಡೆ ಅವರನ್ನು ಕೇಂದ್ರ ಸರ್ಕಾರ ಗುರುವಾರ ನೇಮಕ ಮಾಡಿದೆ.

ಒಡಿಶಾ ಕೇಡರ್ ನ 1987ನೇ ಬ್ಯಾಚ್‌ನ ಐಎಎಸ್ ಅಧಿಕಾರಿಯಾಗಿರುವ ತುಹಿನ್ ಕಾಂತ ಪಾಂಡೆ ಅವರನ್ನು ಸೆಬಿಯ 11ನೇ ಮುಖ್ಯಸ್ಥರಾಗಲಿದ್ದಾರೆ. ಸಂಪುಟದ ನೇಮಕಾತಿ ಸಮಿತಿಯ ಅನುಮೋದನೆಯ ನಂತರ, ಹಣಕಾಸು ಕಾರ್ಯದರ್ಶಿ ಪಾಂಡೆ ಅವರನ್ನು ಮೂರು ವರ್ಷಗಳ ಅವಧಿಗೆ ಸೆಬಿ ಮುಖ್ಯಸ್ಥರಾಗಿ ನೇಮಕ ಮಾಡಲಾಗಿದೆ. ಸೆಬಿ ಹಾಲಿ ಮುಖ್ಯಸ್ಥರಾಗಿರುವ ಮಾಧಬಿ ಪುರಿ ಬುಚ್ ಅವರ ಅಧಿಕಾರಾವಧಿ ಮಾ.1 ರಂದು ಕೊನೆಗೊಳ್ಳಲಿದೆ. 2022ರ ಮಾ.2 ರಂದು ಮೊದಲ ಮಹಿಳಾ ಮುಖ್ಯಸ್ಥರಾಗಿ ಮಾಧಬಿ ಪುರಿ ಬುಚ್ ಅವರು ಅಧಿಕಾರ ವಹಿಸಿಕೊಂಡಿದ್ದರು.