ಉತ್ತರಾಖಂಡದಲ್ಲಿ ಹಿಮಪಾತ- 50ಕ್ಕೂ ಹೆಚ್ಚು ಕಾರ್ಮಿಕರು ಸಿಲುಕಿರುವ ಸಾಧ್ಯತೆ

(ನ್ಯೂಸ್ ಕಡಬ) newskadaba.com ಫೆ. 28 ಬೆಂಗಳೂರು:  ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ಹಿಮಪಾತ ಸಂಭವಿಸಿದ್ದು, ಮಾನಾ ಗ್ರಾಮದಲ್ಲಿ 57 ಕಾರ್ಮಿಕರು ಸಿಲುಕಿರುವ ಸಾಧ್ಯತೆ ಇದೆ ಎಂದು ಶಂಕಿಸಲಾಗಿದೆ.

10 ಕಾರ್ಮಿಕರು ಸುರಕ್ಷಿತವಾಗಿ ಹೊರಬಂದಿದ್ದಾರೆ. ಇನ್ನುಳಿದ ಕಾರ್ಮಿಕರ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್), ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್), ಜಿಲ್ಲಾಡಳಿತ, ಇಂಡೋ-ಟಿಬೆಟಿಯನ್ ಗಡಿ ಪೊಲೀಸ್ (ಐಡಿಬಿಪಿ) ಮತ್ತು ಗಡಿ ರಸ್ತೆ ಸಂಸ್ಥೆ (ಬಿಆರ್‌ಒ) ತಂಡಗಳು ಸ್ಥಳದಲ್ಲಿ ಕಾರ್ಮಿಕರ ಕಾರ್ಯಾಚರಣೆ ನಡೆಸುತ್ತಿವೆ.

error: Content is protected !!
Scroll to Top