(ನ್ಯೂಸ್ ಕಡಬ) newskadaba.com ಮಾ. 01 ಮುಂಬೈ: ಪುಣೆಯ ಸ್ವರ್ಗೇಟ್ ಡಿಪೋದಲ್ಲಿ ನಿಂತಿರುವ ಸರ್ಕಾರಿ ಬಸ್ಸಿನೊಳಗೆ 26 ವರ್ಷದ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಆರೋಪಿಯನ್ನು ಪುಣೆ ಅಪರಾಧ ವಿಭಾಗದ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಆರೋಪಿಯನ್ನು ಪುಣೆಯ ಗುನಾತ್ ಗ್ರಾಮದ ದತ್ತಾತ್ರಯ ರಾಮದಾಸ್ ಗಡೆ (37) ಎಂದು ಗುರುತಿಸಲಾಗಿದ್ದು, ಪೊಲೀಸರು ಶುಕ್ರವಾರ ಸಂಜೆ 6.15 ರ ಸುಮಾರಿಗೆ ಆರೋಪಿಯನ್ನು ನ್ಯಾಯಾಂಗ ಮ್ಯಾಜಿಸ್ಟ್ರೇಟ್ (ಪ್ರಥಮ ದರ್ಜೆ) ಟಿಎಸ್ ಗೈಗೋಲ್ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ. ನ್ಯಾಯಾಲಯ ಆರೋಪಿ ದತ್ತಾತ್ರೇಯ ಗಡೆಯನ್ನು ಮಾರ್ಚ್ 12 ರವರೆಗೆ ಪೊಲೀಸ್ ಕಸ್ಟಡಿಗೆ ನೀಡಿದೆ.
ಪೊಲೀಸರ ಹೇಳಿಕೆಯ ಪ್ರಕಾರ ಆರೋಪಿ ದತ್ತಾತ್ರೇಯ ರಾಮದಾಸ್ ಗಡೆ 26 ವರ್ಷದ ಮಹಿಳೆಯನ್ನು ‘ದೀದಿ’ (ಸಹೋದರಿ) ಎಂದು ಕರೆದು ಸ್ವರ್ಗೇಟ್ ಡಿಪೋದಲ್ಲಿ ನಿಲ್ಲಿಸಿದ್ದ ಖಾಲಿ ‘ಶಿವ ಶಾಹಿ’ ಬಸ್‌ಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ. ಆರೋಪಿ ಮೇಲೆ ಹಲವಾರು ಕ್ರಿಮಿನಲ್ ಪ್ರಕರಣಗಳು ದಾಖಲಾಗಿದ್ದು, ದೂರು ನೀಡಿದವರಲ್ಲಿ ಹೆಚ್ಚಿನವರು ಮಹಿಳೆಯರೇ ಆಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.