(ನ್ಯೂಸ್ ಕಡಬ) newskadaba.com ಮಾ. 10 ಮಂಗಳೂರು: ಫರಂಗಿಪೇಟೆಯ ಯುವಕ ದಿಗಂತ್ ನಾಪತ್ತೆಯಾಗಿದ್ದ ವೇಳೆ ಪ್ರಕರಣದ ಬಗ್ಗೆ ಕೋಮು ಬಣ್ಣ ಹಚ್ಚಿ ಮತೀಯ ಸಂಘರ್ಷಕ್ಕೆ ಶಾಸಕರ ಸಹಿತ ಸಂಘ ಪರಿವಾರದ ಪ್ರಮುಖರು ಪ್ರಯತ್ನಿಸಲಾಗಿದೆ.

ಅವರ ಮೇಲೆ ಕಾನೂನು ಕ್ರಮ ಜರುಗಿಸಬೇಕು ಎಂದು ದ.ಕ. ಜಿಲ್ಲಾ ಜಾತ್ಯತೀತ ಪಕ್ಷಗಳು ಹಾಗೂ ಸಂಘಟನೆಗಳ ಜಂಟಿ ವೇದಿಕೆ ವತಿಯಿಂದ ಸೋಮವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಪಶ್ಚಿಮ ವಲಯ ಐಜಿಪಿಗೆ ಮನವಿ ಸಲ್ಲಿಸಲಾಯಿತು.